ಕವಿ, ಸಾಹಿತಿ ಹೆಚ್.ಎಸ್.ವೆಂಕಟೇಶಮೂರ್ತಿ ಇನ್ನಿಲ್ಲ..!

1 Min Read

 

ಬೆಂಗಳೂರು; ಕನ್ನಡದ ಸಾಹಿತಿ ಹೆಚ್.ಎಸ್.ವೆಂಕಟೇಶಮೂರ್ತಿ ಅವರು ಇಂದು ನಿಧನರಾಗಿದ್ದಾರೆ‌. ಕನ್ನಡಕ್ಕೆ ಅನೇಕ ಸಾಹಿತ್ಯ, ನಾಟಕ, ಕವಿತೆಗಳನ್ನ ಕೊಡುಗೆಯಾಗಿ ನೀಡಿದವರು‌. ಇವರು ಹೆಚ್ಎಸ್ ವಿ ಅಂತಾನೇ ಕನ್ನಡ ಸಾಹಿತ್ಯ ಲೋಕದಲ್ಲಿ ಖ್ಯಾತಿ ಪಡೆದವರು. ಬಾರದ ಲೋಕಕ್ಕೆ ಪಯಣಿಸಿದ್ದಾರೆ‌. ಇಂದು ಬೆಳಗ್ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೇ ಸರಿ.

ಸಾಹಿತಿ ಹೆಚ್.ಎಸ್.ವೆಂಕಟೇಶಮೂರ್ತಿ ಅವರು ಬಹಳ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟೇಶಮೂರ್ತಿ ಅವರನ್ನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೂಡ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ಒಡನಾಡಿಗಳಿಗೆ ಈ ಸಾವನ್ನ ಅರಗಿಸಿಕೊಳ್ಳುವ ಶಕ್ತಿ ಇಲ್ಲ. ವೆಂಕಟೇಶ ಮೂರ್ತಿ ಅವರ ನಿಧನಕ್ಕೆ ಆತ್ಮೀಯರು, ಬಂಧುಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಹೆಚ್. ಎಸ್. ವೆಂಕಟೇಶ ಮೂರ್ತಿ ಅವರಯ ನಾನಾ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಅಂದ್ರೆ ಸುಮಾರು 30 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದವರು. ಅಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದುಕೊಂಡಿದ್ದರು. ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ. ಅವರು ಬರೆದಿರುವ ಅದೆಷ್ಟೋ ಕವನಗಳು ಸಾಹಿತ್ಯ ಪ್ರಿಯರ ಮನಸ್ಸನ್ನ ಗೆದ್ದಿದೆ. ಇಂದು ಅವರು ಬರೆದಿರುವ ಸಾಹಿತ್ಯದ ಮೂಲಕವೇ ಅವರನ್ನ ನೆನಪಿಸಿಕೊಳ್ಳಬೇಕಾಗಿದೆ. ಅವರು‌ ಇನ್ನು ನೆನಪು ಮಾತ್ರ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks