Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

NEET-PG 2025 ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ನಿಂದ ಸಿಕ್ತು ಮಹತ್ವದ ಆದೇಶ..!

---Advertisement---

ನೀಟ್ – ಯುಜಿ ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ನಿಂದ ಗುಡ್ ನ್ಯೂಸ್ ಸಿಕ್ಕಿದೆ. ಕಾನೂನು ಹೋರಾಟ ಮಾಡ್ತಾ ಇದ್ದಂತ ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನೀಟ್, ಪಿಜಿ ಪರೀಕ್ಷೆಯನ್ನು ಒಂದೇ ಶಿಫ್ಟ್ ನಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಬಾರಿಯ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು 2 ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿತ್ತು.

 

ಅಭ್ಯರ್ಥಿಗಳು ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನೀಟ್ ಪಿಜಿ ಪರೀಕ್ಷೆಯನ್ನು ಒಂದೇ ಶಿಫ್ಟ್ ನಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಬಾರಿಯ ನೀಟ್ – ಪಿಜಿ ಪರೀಕ್ಷೆಯನ್ನು ಜೂನ್ 15 ರಂದು ನಡೆಸಲು ನಿರ್ಧರಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಿಂದ ನೀಟ್ – ಪಿಜಿ 2025ರ ಪರೀಕ್ಷೆಯನ್ನು ಎರಡು ಪಾಳಿಗಳಲ್ಲಿ ನಡೆಸುವ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ.

ನೀಟ್ ಪಿಜಿ ಪರೀಕ್ಷೆ ಜೂನ್ 15 ರಂದು ನಡೆಯಲಿದೆ. ಈ ಸಮಯದೊಳಗೆ ಒಂದೇ ಪಾಳಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಎನ್‌ಬಿಇ ಹೇಳಿದೆ. ಒಂದು ವೇಳೆ ಹಾಗಿದ್ದಲ್ಲಿ, ಗಡುವನ್ನು ವಿಸ್ತರಿಸಲು ಎನ್‌ಬಿಇ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ನ್ಯಾಯಾಲಯ ಹೇಳಿದೆ. ಪರೀಕ್ಷೆ ಜೂನ್ 15 ರಂದು ನಡೆಯಲಿದ್ದು, ಸಂಪೂರ್ಣ ಪಾರದರ್ಶಕತೆಯೊಂದಿಗೆ ಒಂದೇ ಪಾಳಿಯಲ್ಲಿ ಪರೀಕ್ಷೆಯನ್ನು ನಡೆಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಲು NBE ಇನ್ನೂ ಸಾಕಷ್ಟು ಸಮಯವನ್ನು ಹೊಂದಿದೆ ಎಂದು ನ್ಯಾಯಾಲಯ ಹೇಳಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...