ಜೂನ್ 08 ರಂದು ದಾವಣಗೆರೆಯಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ಚಿಂತನ ಶಿಬಿರ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂ. 02 : ರಾಷ್ಟ್ರೀಯ ಈಡಿಗ ಮಹಾಮಂಡಳಿ ಕರ್ನಾಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ಚಿಂತನ ಶಿಬಿರವನ್ನು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿದ ರಾಜ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಜೂ. 08 ರ ಭಾನುವಾರ ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಲಿರುವ ಚಿಂತನ ಶಿಬಿರದ  ದಿವ್ಯ ಸಾನಿಧ್ಯ ಡಾ. ಶ್ರೀ ಪ್ರಣವಾನಂದ ರಾಮಸ್ವಾಮಿಗಳು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಯಿಂದ ರಾಜ್ಯದ ಎಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಆಯ್ದ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಸಮಾಜದ ಮುಖಂಡರು ಭಾಗವಹಿಸಬೇಕಾಗಿ ವಿನಂತಿಸಿದ್ದು, ಹೆಚ್ಚಿನ ಮಾಹಿತಿಗಾಗಿ 7353535747, 8088367539, 9902097110 ದೂರವಾಣಿಯನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks