ಬೆಂಗಳೂರು; ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಕುರಿತು ಒಂದು ಪಾಠ ಸೇರಿಸಲು ಸರ್ಕಾರ ತೀರ್ಮಾನ ಮಾಡಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ತಿಳಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಇಂದು ಆಚರಣೆ ಮಾಡಲಾಯ್ತು. ಈ ವೇಳೆ ಕೆಂಪೇಗೌಡರ ಬಗ್ಗೆ ಮುಂದಿನ ಪೀಳಿಗೆಗೂ ತಿಳಿಯಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ.
ಜೂನ್ 27ರಂದು ಕೆಂಪೇಗೌಡ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಬಾಬು ಜಗಜೀವನ್ ರಾಮ್ ಭವನದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಕೆಂಪೇಗೌಡ ಪ್ರಾಧಿಕಾರ ನಿರ್ಮಾಣಕ್ಕೆ ಸುಮ್ಮನಹಳ್ಳಿಯಲ್ಲಿ ಐದು ಎಕರೆ ಜಮೀನು ಖರೀದಿಸಲಾಗಿದೆ. ಹೀಗಾಗಿ ಕೆಂಪೇಗೌಡರ ಜಯಂತಿಯಂದೇ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ಸಂಸ್ಥೆಗಳು ಮತ್ತು ಎಲ್ಲಾ ವರ್ಗದ ಸಾಧಕರಿಗೆ ಪ್ರಶಸ್ತಿ ನೀಡಿಗೌರವಿಸಲಾಗುತ್ತದೆ. ಈ ಸಂಬಂಧ ಸಮಿತಿಯನ್ನು ರಚಿಸಲಾಗುತ್ತದೆ ಎಂದಿದ್ದಾರೆ.
ಇದೆ ವೇಳೆ, ಪಠ್ಯ ಪುಸ್ತಕದಲ್ಲಿ ಕೆಂಪೇಗೌಡರ ಹೆಸರನ್ನು ಸೇರಿಸುವ ಬಗ್ಗೆ ಮಾತನಾಡಿದ್ದಾರೆ. ನಮ್ಮ ಮೆಟ್ರೋಗೆ ಕೆಂಪೇಗೌಡ ಮೆಟ್ರೋ ಅಂತ ಹೆಸರಿಡಬೇಕೆಂದು ಮನವಿ ಸಲ್ಲಿಸಿದ್ದಾರೆ. ಆದರೆ ನಮ್ಮ ನಿಮ್ಮ ಮೆಟ್ರೋ ಅಷ್ಟೇ. ವಿಮಾನ ನಿಲ್ದಾಣದ ಬಳಿಕ ಕೆಂಪೇಗೌಡರ ಪ್ರತಿಮೆ ನಿರ್ಮಿಸಿ ಹೋದರು. ಆದರೆ, ಹಣ ನೀಡಿಲ್ಲ. ಈಗ ನಾವೆಲ್ಲ ಇದನ್ನು ಕ್ಲಿಯರ್ ಮಾಡುತ್ತಿದ್ದೇವೆ. ದೆಹಲಿಯಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡುವ ವಿಚಾರವಾಗಿ ಮಾತನಾಡಿದ ಅವರು, ನಾವು ಅಲ್ಲಿಗೆ ಹೋಗಿ ಪ್ರತಿಮೆ ನಿರ್ಮಿಸಲು ಆಗಲ್ಲ. ದೆಹಲಿ ಸಿಎಂ ಮತ್ತು ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಬೇಕಾಗುತ್ತದೆ. ಈ ಬಗ್ಗೆ ಎಲ್ಲಾ ಸಂಸದರಿಗೂ ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












