Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಡುಗೊಲ್ಲ ನಿಗಮದಿಂದ ಸೌಲಭ್ಯ ಪಡೆದುಕೊಳ್ಳಿ : ಬಿಬಿಎಂಪಿ ರಾಜಣ್ಣ

---Advertisement---

ಸುದ್ದಿಒನ್, ಹಿರಿಯೂರು, ಜೂನ್. 03  : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಸಮುದಾಯದ ಬಂಧುಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ರಾಜ್ಯಾಧ್ಯಕ್ಷರು ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಶ್ರೀ ರಾಜಣ್ಣ ಮನವಿ ಮಾಡಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದಕ್ಕೆ ಅನುದಾನ ಮೀಸಲಿರಿಸಿದೆ. ಚಿತ್ರದುರ್ಗ, ತುಮಕೂರು, ಹಾಸನ, ಚಿಕ್ಕಮಗಳೂರು, ರಾಮನಗರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಾಸವಾಗಿರುವ ಕಾಡುಗೊಲ್ಲ ಸಮುದಾಯದವರು ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.

ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಪಡೆಯಲು ನಿಗದಿತ ಸಮಯದೊಳಗೆ ಬೆಂಗಳೂರು -ಒನ್, ಕರ್ನಾಟಕ -ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಿಕೊಂಡು ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸ್ಥಳೀಯ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳು ಸಮುದಾಯದವರಿಗೆ ತಿಳಿಸಿ ಯೋಜನೆಗಳನ್ನು ಪಡೆಯುವಂತೆ ಸಹಕರಿಸಬೇಕು ಎಂದು ರಾಜಣ್ಣ ಅವರು ಮನವಿ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment