ಹಿರಿಯೂರು, ಜೂನ್. 06 : ನಗರದ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನಾಗಿ ಮೊಹಮ್ಮದ್ ನೌಶಾದ್ ಅವರನ್ನು ನೇಮಕ ಮಾಡಿ ಆದೇಶ ಚಿತ್ರದುರ್ಗ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿದ್ದು, ತಾವು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ಮತ್ತು ಪ್ರಾಮಾಣಿಕ ಸೇವೆ ಸಲ್ಲಿಸಿ, ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಜೊತೆಗೆ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ. ತಮ್ಮನ್ನು ಗುರುತಿಸಿ ನೇಮಕ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹಾಗೂ ಪಕ್ಷದ ಮುಖಂಡರಿಗೆ ಮೊಹಮ್ಮದ್ ನೌಶಾದ್ ಅಭಿನಂದನೆ ಸಲ್ಲಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










