ಬೆಂಗಳೂರು; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿಕ್ಕೆ 11 ಮಂದಿ ಸಾವುಗೆ ಸಂಬಂಧಿಸಿದಂತೆ ಸಾಕಷ್ಟು ಜನರ ತಲೆದಂಡವಾಗಿದೆ. ಇದೀಗ ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ವಿಧಾನಸೌಧದ ತಾರಾತುರಿ ಸಂಭ್ರಮಾಚರಣೆಯ ಹಿಂದೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರ ಪಾತ್ರವಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.
ಹಾಲಿ ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು ಅವರು ತಾರಾತುರಿಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಕೆಲ ಸಚುವರು ಗರಂ ಆಗಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯೂ ನಡೆದಿದ್ದು, ಆ ವೇಳೆ ಗೋವಿಂದ ರಾಜು ಅವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಎನ್ನಲಾಗಿದೆ. ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಆಕ್ರೋಶ ಹೊರಹಾಕಿದ್ದಾರೆ.
ಅಷ್ಟೇ ಅಲ್ಲ ಗೋವಿಂದ ರಾಜು ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುನಾರಸ್ವಾಮಿ ಅವರು ಕೂಡ ಆಕ್ರೋಶ ಹೊರ ಹಾಕಿದರು. ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ ಗೋವಿಂದ ರಾಜು ಒತ್ತಡದಿಂದಲೇ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ.
ಪೊಲೀಸರ ತಲೆದಂಡವಾದರೂ, ಆಪ್ತಕಾರ್ಯದರ್ಶಿಯ ತಲೆದಂಡವಾದರು ಹೋದ ಪ್ರಾಣಗಳು ಮತ್ತೆ ವಾಪಾಸ್ ಬರಲಿವೆಯಾ ಎಂಬುದು ಸಾರ್ವಜನಿಕರ ಪ್ರಶ್ನೆ. ಆದರೆ ಮೃತರ ಕುಟುಂಬಗಳು ಮಾತ್ರ ಕಣ್ಣೀರಲ್ಲಿ ಕೈ ತೊಳೆಯುತ್ತಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















