ಬೆಂಗಳೂರು; ಕಳೆದ ಕೆಲವು ದಿನಗಳಿಂದ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿತ್ತು. ಇದೀಗ ಮತ್ತೆ ಮಳೆ ಶುರುವಾಗಿದೆ. ಮುಂಗಾರು ಮಳೆ ಆರಂಭವಾಗಿದ್ದು, ಹವಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ. ಅಷ್ಟಕ್ಕೂ ಮಳೆ ಎಷ್ಟು ದಿನ ಇರಲಿದೆ, ಎಲ್ಲೆಲ್ಲಾ ಹೆಚ್ಚು ಆಗಿರಲಿದೆ ಎಂಬೆಲ್ಲಾ ಮಾಹಿತಿ ಇಲ್ಲಿದೆ ನೋಡಿ. ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಮಳೆಯಾಗಿದೆ.
ಕಳೆದ ವಾರ ವರುಣ ಬಿಡುವು ಕೊಟ್ಡಿದ್ದರಿಂದ ತಾಪಮಾನದಲ್ಲೂ ಏರಿಕೆಯಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ 32 ಡಿಗ್ರಿವರೆಗೂ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಇಂದು ಮಧ್ಯಾಹ್ನದಿಂದಾನೇ ಮಳೆಯಾಗಿದೆ. ಮೇಖ್ರಿ ಸರ್ಕಲ್, ಪ್ಯಾಲೇಸ್ ರಸ್ತೆ, ಗಾಲ್ಫ್ ರಸ್ತೆ, ರಾಜಭವನ, ವಿಧಾನಸೌಧ, ಶಿವಾನಂದ ವೃತ್ತ, ವಸಂತನಗರ, ಹೆಬ್ಬಾಳ, ನಾಗವಾರ, ಕಲ್ಯಾಣ ನಗರ, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ಹಲವು ಭಾಗದಲ್ಲಿ ಮಳೆ ಬಂದಿದೆ.
ಇನ್ನು ಇಂದಿನಿಂದ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಜೂನ್ 13ರ ತನಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 11, 12 ಮತ್ತು 13 ರಾಜ್ಯದ ಬಹುತೇಕ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆಯನ್ನು ಮಾಡಿದ್ದಾರೆ. ಇನ್ನು ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲ್ಬುರ್ಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಜೂನ್ 13ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಹೊರಗೆ ಹೋಗುವ ಜನತೆ ಕೂಡ ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














