ಚಿತ್ರದುರ್ಗ. ಜೂ.10: ಸ್ವಚ್ಛತೆ ಒಂದು ದಿನದ ಕಾರ್ಯಕ್ರಮ ಆಗಬಾರದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಎಂ.ದ್ಯಾಮಣ್ಣ ಹೇಳಿದರು.

ನಗರದ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್‍ನ ಸಹಕಾರ ಭವನದ ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಮಂಗಳವಾರ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಆರೋಗ್ಯವೇ ಭಾಗ್ಯಯುವಕರ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025ರ ಅಡಿಯಲ್ಲಿ “ಸ್ವಚ್ಛತಾ ಸೇ ಸಹಕಾರ” (ಸಹಕಾರದಿಂದ ಸ್ವಚ್ಛತೆ) ಅಭಿಯಾನದಲ್ಲಿ ಅವರು ಮಾತನಾಡಿದರು.
ಸ್ವಚ್ಛತೆ ಇದು ಒಂದು ದಿನದ ಕಾರ್ಯಕ್ರಮ ಆಗಬಾರದು. ನಾವು ನಮ್ಮ ಕಛೇರಿ, ಮನೆಗಳ ಸುತ್ತ ಮುತ್ತಲಿನ ಆವರಣವನ್ನು ದಿನ ನಿತ್ಯ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಆರೋಗ್ಯವೇ ಭಾಗ್ಯ ಯುವಕರ ಸಂಘದ ನಿರ್ದೇಶಕ ಕಲ್ಲೇಶ್ ಡಿ.ಮೌರ್ಯ ಅವರು ಸ್ವಚ್ಛತೆ ಅಭಿಯಾನದ ವಿಷಯ ಕುರಿತು ನಮ್ಮ ಪರಿಸರವನ್ನು ಹೇಗೆ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ನಂತರ ಸಹಕಾರ ಭವನಆವರಣದ ಸುತ್ತ ಮುತ್ತಸ್ವಚ್ಛತೆ ಮಾಡಲಾಯಿತು.
ಸ್ವಚ್ಛತೆ ಅಭಿಯಾನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಹಾಲು ಒಕ್ಕೂಟ ಹಾಗೂ ಜಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಬಿ.ಶೇಖರಪ್ಪ, ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಸಹಾಯಕ ನಿಬಂಧಕ ಬಾಹುಬಲಿ ಹಂಜೆ, ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಜಯಶ್ರೀ ಹುನಗುಂದ, ಜಿಲ್ಲಾ ಸಹಕಾರ ಶಿಕ್ಷಕ ನಾಗರಾಜ್ ಪಾಟೀಲ್, ಆರೋಗ್ಯ ಭಾಗ್ಯ ಯುವಕರ ಸಂಘದ ಅಧ್ಯಕ್ಷ ಪರಶುರಾಮ್, ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಸಹಕಾರ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ವರ್ಗದವರು ಇದ್ದರು.













