ಬಳ್ಳಾರಿಯಲ್ಲಿ ಶಾಸಕರು, ಮಾಜಿ ಸಚಿವರು, ಸಂಸದರಿಗೆ ಇಡಿ ಬೆಳ್ಳಂ ಬೆಳಗ್ಗೆ ಇಡಿ ಶಾಕ್ ನೀಡಿದೆ. ವಾಲ್ಮೀಕಿ ನಿಗಮದ ಬಹುಕೋಡಿ ಹಗರಣಕ್ಕೆ ಸಂಬಂಧಿಸಿದಂತೆ, ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ಮಾಡಲಾಗಿದೆ. ಲೋಕಸಭಾ ಚುನಾವಣೆ ವೇಳೆ, ವಾಲ್ಮೀಕಿನಿಗಮದ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇತ್ತು. ಹೀಗಾಗಿ ಅಧಿಕಾರಿಗಳು ಅದಕ್ಕೆ ಸಂಬಂಧಿಸಿದಂತೆ ಏನಾದ್ರೂ ದಾಖಲೆಗಳು ಸಿಗಬಹುದಾ ಎಂಬ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಜ ಗಣೇಶ್, ಕೂಡ್ಲಗಿ ಶಾಸಕ ಶ್ರೀನಿವಾಸ್ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಮನೆಯ ಬಾಗಿಲು ಕ್ಲೋಸ್ ಮಾಡಿ ವಿಚಾರಣೆ ಮಾಡ್ತಿದ್ದಾರೆ. ಇಡಿ ಅಧಿಕಾರಿಗಳ ದಾಳಿ ವೇಳೆ ಮನೆ ಕೆಲಸದ ಓರ್ವ ಮಹಿಳೆ ಎಂಟ್ರಿ ನೀಡಿದ್ದರು. ಈ ವೇಳೆ ಇಡಿ ಅಧಿಕಾರಿಗಳ ಅನುಮತಿಯನ್ನ ಪಡೆದು ಮಹಿಳೆ ಒಳಗೆ ಹೋಗಿದ್ದಾರೆ. ಅವರನ್ನ ಬಿಟ್ಟರೆ ಬೇರೆ ಯಾರಿಗೂ ಅವಕಾಶ ನೀಡದೆ ಪರಿಶೀಲನೆ ನಡೆಸುತ್ತಿದ್ದಾರೆ.
ಅತ್ತ ಬೆಂಗಳೂರಿನಲ್ಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರಗೂ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು, ಶಾಸಕರ ಭವನದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ವಾಲ್ಮೀಕಿ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರು ಅರೆಸ್ಟ್ ಆಗಿದ್ದಲ್ಲದೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಆಗಿತ್ತು. ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮನೆಯಲ್ಲೂ ದಾಳಿ ನಡೆಸಿದ್ದಾರೆ. ಎಲ್ಲಾ ಶಾಸಕರ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











