Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಾಪುರ : ಮಕ್ಕಳಿಗೆ ನೋಟ್ ಬುಕ್ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 12 : ಮಲ್ಲಾಪುರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಅಂಬೇಡ್ಕರ್ ಸೇವಾ ಸಮತಿಯಿಂದ ಗುರುವಾರ ನೋಟ್‍ಬುಕ್‍ಗಳನ್ನು ವಿತರಿಸಲಾಯಿತು.

ತಾಲ್ಲೂಕು ಕೆ.ಡಿ.ಪಿ. ಸದಸ್ಯ ಸಿ.ಬಿ.ನಾಗರಾಜ್ ನಂದಿಪುರ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡುತ್ತ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರ ಜೊತೆ ಸಂಘ ಸಂಸ್ಥೆಗಳವರು ದಾನಿಗಳು ನೀಡುವ ನೆರವನ್ನು ಪಡೆದುಕೊಂಡು ಶಿಕ್ಷಣವಂತರಾಗುವಂತೆ ಹೇಳಿದರು.

ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಮಾದಾರ ಚನ್ನಯ್ಯ ಮಠದ ಆನಂದಪ್ಪ, ಪವನ್‍ಕುಮಾರ್, ವಿಕಾಸ್, ರಾಜಪ್ಪ ಹೆಚ್. ಕೀರ್ತಿಸಾಗರ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಾಗರತ್ನಮ್ಮ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಿದ್ದಲಿಂಗಮ್ಮ, ಗುರುಮೂರ್ತಿ, ಗಜೇಂದ್ರ ಹಾಗೂ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment