ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ : ಚಿತ್ರದುರ್ಗದಲ್ಲಿ ಪ್ರತಿಭಟನೆ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 12 : ಹಾವೇರಿಯಲ್ಲಿ ಬ್ಯಾನರ್‍ಗಳನ್ನು ತೆರವುಗೊಳಿಸುತ್ತಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೌರ ಕಾರ್ಮಿಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಅನಧಿಕೃತವಾಗಿ ಕಟ್ಟಲಾಗಿದ್ದ ಬ್ಯಾನರ್‍ಗಳನ್ನು ತೆರವುಗೊಳಿಸಿದರೆಂಬ ಕಾರಣಕ್ಕಾಗಿ ಪೌರ ಕಾರ್ಮಿಕ ರಾಜು ಯಲ್ಲಪ್ಪ ದೊಡ್ಡಮನಿ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಿದ್ದು, ನ್ಯಾಯಾಲಯ ಜಾಮೀನು ನೀಡಬಾರದು. ಎರಡು ವರ್ಷಗಳ ಕಾಲ ದಲಿತ ಕೇರಿಗಳಲ್ಲಿ ಕಸ ಗುಡಿಸುವುದು, ಚರಂಡಿ ಸ್ವಚ್ಚಗೊಳಿಸುವ ಶಿಕ್ಷೆ ವಿಧಿಸಬೇಕು. ಪೌರ ಕಾರ್ಮಿಕರಿಗೆ ಹಾಗೂ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡುವಂತೆ ಪ್ರತಿಭಟನಾನಿರತ ಪೌರ ಕಾರ್ಮಿಕರು ಒತ್ತಾಯಿಸಿದರು.

ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ದುರುಗೇಶ್, ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಸಿ.ರೇಣುಕಾ, ಕೆ.ರಾಜಣ್ಣ, ಜಗದೀಶ್, ಪುಟ್ಟಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks