ಹಾವೇರಿ: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗುತ್ತಿದ್ದು, ಅಗತ್ಯ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಈ ಸಂಬಂಧ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಹಲವು ಕಠಿಣ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.
ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ಪಕ್ಕದ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಒಮಿಕ್ರಾನ್ ಕೇಸ್ ಹೆಚ್ಚಳವಾಗುತ್ತಿದೆ. ಹೀಗಾಗಿ ತಜ್ಞರ ಜೊತೆ ಚರ್ಚಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣ ಮಾಡುವ ಹಿನ್ನೆಲೆ ಸಭೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಶುರುವಾಗಲಿದೆ. ಈಗಾಗಲೇ ಹೊಸ ವರ್ಷಕ್ಕೆ ಸರ್ಕಾರದಿಂದ ಹೊಸ ನಿಯಮ ಜಾರಿಯಾಗಿದೆ. ಜನಸಂದಣಿ ಸೇರದಂತೆ ಸೂಚನೆ ನೀಡಲಾಗಿದೆ. ಜೊತೆಗೆ ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳಲ್ಲಿ 50% ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಈಗ ನಾಳೆ ಮತ್ತೆ ಸಭೆ ಬಳಿಕ ಮತ್ತಷ್ಟು ರೂಲ್ಸ್ ಆ್ಯಡ್ ಆಗಬಹುದು.