ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 13 : ಎಲ್ಲಾ ರಂಗಗಳಲ್ಲಿಯೂ ಪೈಪೋಟಿಯಿರುವುದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಹೆಚ್ಚಿನ ಗಮನಹರಿಸಬೇಕೆಂದು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್ ತಿಳಿಸಿದರು.

ಮಹಾರಾಜ ಕಲಾ, ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಸಾಂಸ್ಕøತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಪಠ್ಯಗಳ ಜೊತೆ ಸಾಂಸ್ಕøತಿಕ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಬಹುದೆಂದು ಹೇಳಿದರು.
ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ವಿಭಾಗದ ಕನ್ನಡ ಪ್ರಾಧ್ಯಾಪಕರಾದ ಡಾ.ಕರಿಯಪ್ಪ ಮಾಳಿಗೆ ಮಾತನಾಡಿ ಬುದ್ದ, ಬಸವ, ಅಂಬೇಡ್ಕರ್ರವರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಹ ಪ್ರಾಧ್ಯಾಪಕರಾದ ಎನ್.ಟಿ.ಗಂಗಮ್ಮ ಮಾತನಾಡುತ್ತ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕಲೆ, ಕ್ರೀಡೆ, ಸಾಹಿತ್ಯ, ಸಂಗೀತ, ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕೆಂದರು.
ಪ್ರಾಂಶುಪಾಲರಾದ ಡಿ.ಆರ್.ರಂಗಸ್ವಾಮಿ, ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್, ಡಾ.ಧನಂಜಯ, ಡಾ.ಮಹೇಶ್, ಡಾ.ಗುರುದತ್, ಡಾ.ಹೇಮಲತಾಕಟ್ಟಿ, ಸ್ವರೂಪ, ಶ್ರೀನಾಥ್
ದಾದಾಪೀರ್, ಹರೀಶ್, ತರನಮ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
















