Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನವೆಂಬರ್ ನಲ್ಲಿ ಸಿದ್ದರಾಮಯ್ಯ ಖುರ್ಚಿ ಬದಲಾವಣೆ : ಖರ್ಗೆ ಮುಂದಿನ ಸಿಎಂ..?

---Advertisement---

ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾಗುತ್ತೆ ಎಂಬ ಮಾತು ಇಂದು ನಿನ್ನೆಯದಲ್ಲ‌. ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಸಿಎಂ ಖುರ್ಚಿಗೆ ಕಾದಾಟ ನಡೆಯುತ್ತಲೇ ಇದೆ. ಸಿದ್ದರಾಮಯ್ಯ ತಮ್ಮ ಹುದ್ದೆಯನ್ನ ಬಿಟ್ಟುಕೊಟ್ಟರೆ ನೆಕ್ಸ್ಟ್ ಮೂಮೆಂಟ್ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ ಎಂಬುದೇ ಗಟ್ಟಿ ಮಾತು. ಆದರೆ ಇದೀಗ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಸಿಎಂ ಆಗಲಿರುವ ಇನ್ನೊಬ್ಬರ ಹೆಸರನ್ನು ಹೇಳಿದ್ದಾರೆ.

ಸಿಎಂ ಬದಲಾವಣೆಯ ಬಗ್ಗೆ ಮಾತನಾಡಿದ್ದ ವಿಶ್ವನಾಥ್ ಅವರು, ನವೆಂಬರ್ ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿಯೋದು ಗ್ಯಾರಂಟಿ. ಮಲ್ಲಿಕಾರ್ಜುನ ಖರ್ಗೆ ಅಥವಾ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆಗಿ ಉಳಿಯುವುದಿಲ್ಲ ಎಂದಿದ್ದಾರೆ.

ಇದೆ ವೇಳೆ ಜಾತಿಗಣತಿ ವಿಚಾರಕ್ಕೆ ಮಾತನಾಡಿದ್ದು, ಸಿದ್ದರಾಮಯ್ಯ ಅವರು ಹತ್ತು ವರ್ಷದ ಹಿಂದೆಯೇ ಜಾತಿವಾರು ಗಣತಿಯನ್ನು ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು ಎರಡೂವರೆ ವರ್ಷ ಜಾತಿಗಣತಿ ಮಾಡಿದ್ದರು. ಅದಕ್ಕೋಸ್ಕರ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಅಂದಿನಿಂದ ಜಾತಿಗಣತಿಯನ್ನ ಗುಟ್ಟಾಗಿಯೇ ಇಟ್ಟುಕೊಂಡಿದ್ದರು. ಈಗ ಹೈಕಮಾಂಡ್ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ತಾನೇ ಸಾಧ್ಯ..? ಜಾತಿಗಣತಿ ಮಾಡಲು ಶಿಕ್ಷಕರು ಬೇಕೆ ಬೇಕು. ಈಗಾ ತಾನೇ ಶಾಲೆ ಆರಂಭವಾಗಿದೆ. ಶಿಕ್ಷಕರು ಲಭ್ಯವಿರುವುದಕ್ಕೆ ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್. ವಿಶ್ವನಾಥ್ ಗದಾಪ್ರಹಾರ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...