ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ಜೂನ್. 19 : ಗಾಂಧಿ ಕುಟುಂಬದ ಕುಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿರವರ ಹುಟ್ಟುಹಬ್ಬದ ಅಂಗವಾಗಿ ಜಾನುಕೊಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ನೋಟ್ಬುಕ್, ಪೆನ್ ಹಾಗೂ ಸಿಹಿ ವಿತರಿಸಲಾಯಿತು.
ಮಕ್ಕಳಿಗೆ ನೋಟ್ಬುಕ್ಗಳನ್ನು ವಿತರಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರಹಳ್ಳಿ ಉಲ್ಲಾಸ್ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರುರವರಿಗೆ ಮಕ್ಕಳೆಂದರೆ ಅಪಾರ ಪ್ರೀತಿ. ಹಾಗಾಗಿ ಅವರ ಮೊಮ್ಮಗ ರಾಹುಲ್ಗಾಂಧಿರವರ ಹುಟ್ಟುಹಬ್ಬವನ್ನು ಮಕ್ಕಳಿಗೆ ನೋಟ್ಬುಕ್ ವಿತರಣೆ ಮೂಲಕ ಆಚರಿಸುತ್ತಿರುವುದು ನಮಗೆ ಖುಸಿ ಕೊಟ್ಟಿದೆ ಎಂದು ಹೇಳಿದರು.
ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಕಾಸ್, ನಗರಾಧ್ಯಕ್ಷ ಪವನ್, ಗ್ರಾಮಾಂತರ ಅಧ್ಯಕ್ಷ ಮಹಾಂತೇಶ್, ಉಪಾಧ್ಯಕ್ಷ ಸುನಿಲ್, ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ್, ಶಶಿಕುಮಾರ್, ಬಾಲಣ್ಣ, ಸುರೇಶ್, ಶಿವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣಮ್ಮ ಹಾಗೂ ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











