ಚಿತ್ರದುರ್ಗ. ಜೂ.20: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಇದು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಮಹತ್ವ ಗುರುತಿಸಿ, ಪ್ರತಿ ವರ್ಷ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಮಹತ್ವದ ಉಪಕ್ರಮದಲ್ಲಿ ಜಿಲ್ಲೆಯು ಸಕ್ರಿಯವಾಗಿ ಭಾಗವಹಿಸುವುದು ಅತ್ಯಗತ್ಯವಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡು ಯಶಸ್ವಿಗೊಳಿಸಲು ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಜಲ ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಫಲಾನುಭವಿಗಳ ಸಭೆ ಆಯೋಜಿಸುವುದು ಹಾಗೂ ಮಹಾತ್ಮಾಗಾಂಧಿ ನರೇಗಾ ಯೋಜನೆ ಕೂಲಿ ಕಾರ್ಮಿಕರು, ಸಾರ್ವಜನಿಕರು ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















