Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಹೆಚ್ಡಿಕೆ ಅವಧಿಯ ನಿರ್ಧಾರ ಎಂದ ಜಮೀರ್ ಅಹ್ಮದ್..!

---Advertisement---

ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 15ರಷ್ಟು ಮೀಸಲಾತಿ ನೀಡಿರುವ ಬಗ್ಗೆ ಇದೀಗ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ವಸತಿ ಯೋಜನೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇಕಡ 15ರಷ್ಟು ಮೀಸಲಾತಿ ಕೈಗೊಂಡಿದ್ದು ಈಗಿನ ನಿರ್ಧಾರವಲ್ಲ ಎಂದಿದ್ದಾರೆ.

2010ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು. ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇಕಡ 15ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲಗಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ. 2019ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಜ ಶಿಫಾರಸ್ಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇಕಡ 10ರಷ್ಟು ಮೀಸಲಾತಿ ಪ್ರಮಾಣ ಶೇಕಡ 15ಕ್ಕೆ ಹೆಚ್ಚಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು, ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಸಹ ಶೇಕಡ 15ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತುಮ ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆಗಳನ್ನು ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ನೀಸಲಾತಿ ಇಂದಿನದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...