Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯುತ್ತಾರಾ..? ಯಡಿಯೂರಪ್ಪ ಪುತ್ರ ಹೇಳಿದ್ದೇನು..?

---Advertisement---

 

ಬೆಂಗಳೂರು; ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಕೆಲಸ ಮಾಡುತ್ತಿದ್ದು, ಹಲವು ದಿನಗಳಿಂದಾನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಅವರನ್ನೇ ಮುಂದುವರೆಸುತ್ತಾರಾ ಅಥವಾ ಬದಲಾವಣೆಯಾಗುತ್ತಾ ಎಂಬ ಪ್ರಶ್ನೆಗೆ ಇದೀಗ ಬಿವೈ ವಿಜಯೇಂದ್ರ ಅವರೇ ಉತ್ತರಿಸಿದ್ದಾರೆ.

ರಾಜ್ಯ ಸರ್ಕಾರದ ಕಾರ್ಯವೈಖರಿ, ಒಂದು ವಿರೋಧ ಪಕ್ಷವಾಗಿ ನಮಗೂ ಕೂಡ ಬಹಳ ದೊಡ್ಡ ಜವಾಬ್ದಾರಿ ಇದೆ. ಪ್ರಜಾಪ್ರಭುತ್ವಕ್ಕೆ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ಅದಕ್ಕಿಂತ ಹೆಚ್ಚಿನ ಜವಾಬ್ದಾರಿ ವಿರೋಧ ಪಕ್ಷಕ್ಕೆ ಇದೆ. ನಾವೂ ಕೂಡ ಕಳೆದ ಐದಾರು ತಿಂಗಳಲ್ಲಿ ಪಕ್ಷ ಯಾವ ರೀತಿ ಚಟುವಟಿಕೆಗಳನ್ನ ನಡೆಸ್ತಾ ಇದೆ. ಯಾವ ರೀತಿಯಾಗಿ ಕಾಂಗ್ರೆಸ್ ಸರ್ಕಾರದ‌ ಕರಾಳ ಮುಖವನ್ನು ಜನರ ಮುಂದೆ ಬಿಚ್ಚಿಡ್ತಾ ಇರುವಂತ ಕೆಲಸವನ್ನು ಪಕ್ಷವಾಗಿ ಮಾಡಿದೆ ಎಂಬುದನ್ನು ಕೂಡ ನಾನು ವಿವರಿಸಿದ್ದೇನೆ. ಅದಕ್ಕೆ‌ ಸಂತೋಷ ವ್ಯಕ್ತಪಡಿಸಿದ್ದಾರೆ.

ರಾಜ್ಯಾಧ್ಯಕ್ಷರಾಗಿ ನಿಮ್ಮನ್ನೇ ಮುಂದುವರೆಸುತ್ತಾರಾ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಬಿವೈ ವಿಜಯೇಂದ್ರ ಅವರು, ಒಂದೂ ಕಾಲು ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ಕೊಟ್ಟಿರುವ ಜವಾಬ್ದಾರಿಯನ್ನು ಬಹಳ ಶ್ರದ್ದೆಯಿಂದ ನಾನು ಮಾಡಿಕೊಂಡು ಬಂದಿದ್ದೀನಿ. ಪ್ರತಿ ಸಂದರ್ಭದಲ್ಲಿ ಕೂಡ ನನಗೆ ಮಾಹಿತಿ ಬಂದಾಗ ಕೇಂದ್ರಕ್ಕೆ ಕೊಡಬೇಕು. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲಾ ಜಿಲ್ಲೆಯ ಅಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಪ್ರಾಯ ಪಡೆದು, ಆಮೇಲೆ ಏನಾಗಬೇಕು, ಯಾರನ್ನ ಮಾಡಿದರೆ ಒಳ್ಳೆಯದಾಗುತ್ತೆ ಎಂಬುದನ್ನ ಚರ್ಚೆ ಮಾಡಿ ತೀರ್ಮಾನಿಸುತ್ತಾರೆ. ಎಲ್ಲವೂ ಒಳ್ಳೆಯದೇ ಆಗುತ್ತೆ ಎಂದು ನಂಬಿದ್ದೇನೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment