ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 22 : ಸದೃಢ ಸಮತೋಲನ ಆರೋಗ್ಯಕ್ಕೆ ಯೋಗ ಸಹಕಾರಿಯಾಗಲಿದೆ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್
ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಹನ್ನೊಂದನೆ ವಿಶ್ವ ಯೋಗ ದಿನವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಗಾಟಿಸಿ ಮಾತನಾಡಿದರು.
ಯೋಗದಿಂದ ಮಾನಸಿಕ ಹಾಗೂ ದೈಹಿಕವಾಗಿ ಏಕಾಗ್ರತೆ ಮೂಡಲಿದೆ. ಪ್ರತಿಯೊಬ್ಬರು ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದೆಂದರು.
ಜಯಶೀಲರೆಡ್ಡಿ ಮಾತನಾಡಿ ಕ್ರಮಬದ್ದವಾಗಿ ಯೋಗ ಮಾಡಿದಾಗ ಸರ್ವ ರೋಗಗಳನ್ನು ನಿವಾರಿಸಿಕೊಳ್ಳಬಹುದೆಂದು ಯೋಗದ ಮಹತ್ವ ತಿಳಿಸಿದರು.
ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ ಯೋಗ ಕೇವಲ ಜೂ. 21 ಕ್ಕೆ ಮಾತ್ರ ಮೀಸಲಾಗಬಾರದು. ಪ್ರತಿನಿತ್ಯದ ಜೀವನದಲ್ಲಿ ಯೋಗ ಹಾಸುಹೊಕ್ಕಾಗಬೇಕು. ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರೆ ಒಳ್ಳೆಯದು ಎಂದರು.
ಭಾರತ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದೆ. ಯೋಗ, ಧ್ಯಾನ, ಪ್ರಾಣಾಯಾಮದ ಮಹತ್ವವನ್ನು ಮೊದಲು ಅರಿಯಬೇಕೆಂದು ಹೇಳಿದರು.
ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಮೂರ್ತಾಚಾರ್, ಸಿ.ಆರ್.ಪಿ.ಶಿವರುದ್ರಪ್ಪ, ಸಂಸ್ಥೆಯ ಶೈಕ್ಷಣಿಕ ಸಂಯೋಜಕಿ ಮೇಘನಾ ಚೇತನ್
ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಕ ಕೆ.ಎಂ.ಮಲ್ಲಿಕಾರ್ಜುನ್, ಯೋಗಪಟು ಸುನಿಲ್‍ಕುಮಾರ್ ಡಿ.ಜೆ. ರವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕರು
ಮಕ್ಕಳು ಯೋಗ ಪ್ರದರ್ಶಿಸಿದರು.






