Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತಿರುಗಿಬಿದ್ಧ ಮತ್ತೊಬ್ಬ ಶಾಸಕ : ರಾಜೀನಾಮೆ ಕೊಡೋಕು ಸಿದ್ದ ಅಂದ್ರು..!

---Advertisement---

ಚಿಕ್ಕೋಡಿ : ಕಳೆದ ಕೆಲವು ದಿನಗಳಿಂದ ಅದ್ಯಾಕೋ ಏನೋ ಸಿದ್ದರಾಮಯ್ಯ ಸರ್ಕಾರದಲ್ಲಿ ಇರುವವರೇ ತಿರುಗಿ ಬಿದ್ದಿದ್ದಾರೆ. ಮೊನ್ನೆಯಷ್ಟೇ ಪಾಟೀಲ್ ಅವರು ವಸತಿ ಯೋಜನೆಯ ಅವ್ಯವಹಾರದ ಬಗ್ಗೆ ಮಾತಾಡಿದ್ರು, ಈಗ ಇನ್ನೊಬ್ಬ ಶಾಸಕರು ಮಾತನಾಡಿದ್ದಾರೆ. ಅದರಲ್ಲೂ ರಾಜೀನಾಮೆ ನೀಡುವ ಬಗ್ಗೆಯೂ ಎಚ್ಚರಿಸಿದ್ದಾರೆ.

ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಇದೀಗ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಎರಡು ವರ್ಷವಾದರೂ ಕಾಮಗಾರಿ ಸಂಪೂರ್ಣವಾಗಿಲ್ಲ. ವಿಳಂಬವಾಗುತ್ತಲೆ ಇದೆ. ಹೀಗಾಗಿ ತಮ್ಮದೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸರ್ಕಾರದಿಂದ ಅನುದಾನ ಬಂದ್ರು ವರ್ಕ್ ಆರ್ಡರ್ ಬಂದಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ನನಗೆ ಅಸಮಾಧಾನ ಆಗಿದೆ. ನನ್ನ ಮನಸ್ಸಿಗೆ ನೋವಾಗಿದೆ. ನಾನು ರಾಜೀನಾಮೆ ಕೊಡ್ತೀನಿ. ನನ್ನ ಮನಾ್ಸಿಗೆ ನೋವಾಗಿದೆ. ನಾನು ರಾಜೀನಾಮೆ ಕೊಡ್ತೀನಿ. ಎರಡು ದಿನದಲ್ಲಿ ಸಿಎಂಗೆ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ. ಅಂತ ಚಿಕ್ಕೋಡಿಯಲ್ಲಿ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ.

ಶಾಸಕ ರಾಜು ಕಾಗೆ ಅಸಮಾಧಾನ ವಿಚಾರವಾಗಿ ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರತಿಕ್ರಿಯಿಸಿದ್ದು, ರಾಜೀನಾಮೆ ಕೊಡಬೇಕು ಅಂತಾ ಹೇಳಿದ್ದಾರೆ. ನೀವು ರಾಜೀನಾಮೆ ಕೊಡುವುದರಿಂದ ಈ ಸಮಸ್ಯೆ ಸರಿಯಾಗಲ್ಲ. ನಿಮ್ಮ ಮುಖ್ಯಮಂತ್ರಿ ಅವರನ್ನ ರಾಜೀನಾಮೆ ಕೊಡಿಸಿ. ಜನರ ಬಳಿ ಹೋಗೋಣ ಏನು ತೀರ್ಮಾನ ಆಗುತ್ತೆ ನೋಡೋಣ. ಬಿಜೆಪಿಗೆ ಯಾರು ಬಂದರೂ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...