ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಹಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ, ಧಾರವಾಡ, ಬೆಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಶಿವಮೊಗ್ಗದಲ್ಲಿ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆನೇಕಲ್ ಪಟ್ಟಣದ ಪಂಚಾಯತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡದ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕದ ವಾಲ್ಸಂದ್, ಕಲಬುರಗಿ ಪಿಆರ್ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾಮ ಪಂಚಾಯತಿ, ಪಿಡಿಒ ರಾಮಚಂದ್ರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಗದಗದ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅಲ್ಲದೆ ಅವರ ಬಾಗಲಕೋಟೆ, ಜಮಖಂಡಿಯಲ್ಲಿರುವ ಮನೆಗಳ ಮೇಲೂ ದಾಳಿ ನಡೆದಿದೆ. ಕೆರೂರಿನಲ್ಲಿರುವ ಮನೆ ಮೇಲೂ ದಾಳಿ ನಡೆಸಿ, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲೂ ದಾಳಿ ನಡೆಸಿರುವ ಅಧಿಕಾರಿಗಳು, ಬಿಬಿಎಂಪಿಯಲ್ಲಿರುವ ಪ್ರಕಾಶ್ ಎಇ ಎನ್ನುವವರ ಮೇಲೆ ದಾಳಿ ನಡೆಸಿದ್ದಾರೆ. ಕಲಬುರಗಿಯ ಮಾಜಿ ಇಂಜಿಯರ್ ಮನೆ ಮೇಲೂ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ ಕಲಬುರಗಿಯ ಪಿಡಿಓ ಮನೆ ಮೇಲೂ ದಾಳಿ ನಡೆಸಿ, ಹಲವು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.


