ಚಿತ್ರದುರ್ಗ. ಜೂನ್.23: ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ವಿಲೇವಾರಿಗೆ ಅನುಕೂಲವಾಗುವಂತೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತವಾನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತ್ರೈಮಾಸಿಕ ಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿದೂರು ದಾಖಲು, ಮೇಲ್ಮನವಿ ಹಾಗೂ ವಿಚಾರಣೆ ವಿಳಂಬವಾಗುವುದರಿಂದ ವಿಲೇವಾರಿ ಪ್ರಮಾಣ ಕಡಿಮೆಯಿದೆ. ಸಂತ್ರಸ್ತರಿಗೆ ಕಾಲಮಿತಿಯಲ್ಲಿ ನ್ಯಾಯ ಒದಿಗುಸವ ದೃಷ್ಠಿಯಿಂದ ಜಿಲ್ಲಾ ಹಂತದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಯ ಅಗತ್ಯವಿದೆ. ಬೇರೆ ಜಿಲ್ಲೆಗಳಲ್ಲಿ ಪೋಕ್ಸೋ ಹಾಗೂ ದೌರ್ಜನ್ಯ ಪ್ರಕರಣಗಳ ವಿಚಾರಣೆ ಈಗಾಗಲೇ ಜಿಲ್ಲಾ ಹಂತದಲ್ಲಿ ಪ್ರತ್ಯೇಕ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಇದೇ ಮಾದರಿಯಲ್ಲಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ವರದಿ ಸಿದ್ದಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಜಿಲ್ಲೆಯಲ್ಲಿ ಮೇ ಅಂತ್ಯಕ್ಕೆ 129 ದೌರ್ಜನ್ಯ ಪ್ರಕರಣಗಳು ಬಾಕಿಯಿವೆ. ಏಪ್ರಿಲ್ ತಿಂಗಳಿನಲ್ಲಿ 128 ಪ್ರಕರಣಗಳು ಬಾಕಿಯಿದ್ದು, 2 ಹೊಸ ಪ್ರಕರಣಗಳು ಸೇರಿ ಒಟ್ಟು 130 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದವು. ಈ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾದರೆ, 2 ಪ್ರಕರಣಗಳಲ್ಲಿ ಆರೋಪಿತರು ಬಿಡುಗಡೆಯಾಗಿದ್ದಾರೆ. ಮೇ ತಿಂಗಳಿನಲ್ಲಿ 2 ದೌರ್ಜನ್ಯ ಪ್ರಕರಣಗಳು ಹೊಸದಾಗಿ ದಾಖಲಾಗಿವೆ ಎಂದು ಸರ್ಕಾರಿ ಅಭಿಯೋಜಕಿ ಸಭೆಗೆ ಮಾಹಿತಿ ನೀಡಿದರು.
ವಿಶೇಷ ಪೊಲೀಸ್ ಠಾಣೆ ಸ್ಥಾಪನೆ :
ಜಿಲ್ಲೆಯಲ್ಲಿ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡಲು ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕವಾಗಿ ವಿಶೇಷ ಪೊಲೀಸ್ ಠಾಣೆ ತರೆಯಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಂತ್ರಸ್ತರು ನೇರವಾಗಿ ಈ ವಿಶೇಷ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸಬಹುದು. ಇಲ್ಲವಾದರೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರೂ ಕೂಡ ವಿಶೇಷ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗುವುದು. ಪ್ರಕರಣ ದಾಖಲಾದ ಕೂಡಲೇ ಸ್ಥಳ ಪರಿಶೀಲಿಸಿ, ಕೃತ್ಯದ ಕರುಹುಗಳನ್ನು ಕಲೆ ಹಾಕಿ, ಫರ್ಯಾದಿ, ನೊಂದವರು ಹಾಗೂ ಪ್ರತ್ಯಕ್ಷ ದರ್ಶಿಗಳ ಹೇಳಿ ಪಡೆದು ಆರೋಪಿತರನ್ನು ಪತ್ತೆಮಾಡಿ ಕಾನೂನಿ ರಿತ್ಯಾ ಕ್ರಮ ಕೈಗೊಳ್ಳುಲು ವಿಶೇಷ ಪೊಲೀಸ್ ಠಾಣೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕ ದಿನಕರ್ ತಿಳಿಸಿದರು.
ದೌರ್ಜನ್ಯ ಪ್ರತಿಬಂಧಕ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ಬಿ ರಿಪೋರ್ಟ್ ದಾಖಲಿಸಲಾಗಿದೆ. 2 ಪ್ರಕರಣಗಳನ್ನು ಬೇರೆ ಜಿಲ್ಲೆಗೆ ವರ್ಗಾಯಿಸಲಾಗಿದೆ. 8 ಪ್ರಕರಣಗಳು ತನಿಖೆ ಹಂತದ್ಲಲಿವೆ. 15 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಪೊಲೀಸ್ ಉಪಾಧೀಕ್ಷಕ ದಿನಕರ್ ಮಾಹಿತಿ ನೀಡಿದರು.
ಜನವರಿ 2025 ರಿಂದ ಜೂನ್ ಮಾಹೆಯವರೆಗೆ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 21 ಪರಿಶಿಷ್ಟ ಜಾತಿ ಹಾಗೂ 3 ಪರಿಶಿಷ್ಟ ವರ್ಗಕ್ಕೆ ಸೇರಿದವರ ಮೇಲಿನ ಪ್ರಕರಣಗಳಾಗಿವೆ. ಒಟ್ಟು ರೂ.17,27,336 ಪರಿಹಾರ ಧನವನ್ನು ನೊಂದವರಿಗೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಗೆ ತಿಳಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳು ಹಾಗೂ ಪಾಲಕರಿಗೆ ಸಮಾಲೋಚನೆ ನಡೆಸಿ ಮುಖ್ಯವಾಹಿನಿಗೆ ತರಬೇಕು. ವಲಸೆ ಹೋದ 5 ಮಕ್ಕಳನ್ನು ಪತ್ತೆ ಹಚ್ಚಬೇಕು. ಬಾಲ ಕಾರ್ಮಿಕರ ಪತ್ತೆಗೆ ಪೌಲ್ಟಿçà ಸೇರಿದಂತೆ ವಿವಿಧ ಸ್ಥಳಗಳಿಗೆ ದಿಢೀರ್ ದಾಳಿ ಮಾಡಬೇಕು. ಬಾಲ್ಯವಿವಾಹ, ಬಾಲ ಗರ್ಭಿಣಿ, ತಾಯಿ ಹಗೂ ಶಿಶು ಮರಣ ಪ್ರಮಾಣವನ್ನು ತಗ್ಗಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಶಾಲೆಯಿಂದ ಹೊರಗುಳಿದ 61 ಮಕ್ಕಳ ಪೈಕಿ 53 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. ಉಳಿದ 8 ಮಕ್ಕಳಲ್ಲಿ 2 ಇಬ್ಬರು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಹಾಜರಾಗಿದ್ದಾರೆ. ಒಂದು ಮಗು ಶಾಲೆ ಬರಲು ಆಸಕ್ತಿ ತೊರದೆ ಹಠ ಮಾಡುತ್ತಿದೆ. ಕೂಡಲೇ ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಮಗುವನ್ನು ಮುಖ್ಯ ವಾಹಿಗೆ ತರಲಾಗುವುದು. 5 ಮಕ್ಕಳು ವಲಸೆ ಹೋಗಿರುವ ಕಾರಣ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗ್ರಾಮೀಣ ಭಾಗದಲ್ಲಿ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಬೇಕು. ರೈತರಿಗೆ ಬಿತ್ತನೆ ಬೀಜದ ಸಂಗ್ರಹಣೆ ಕುರಿತು ಕೃಷಿ ಅಧಿಕಾರಗಳು ತರಬೇತಿ ನೀಡಬೇಕು ಎಂದು ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಸಭೆಯಲ್ಲಿ ಮನವಿ ಮಾಡಿದರು.
ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕಿರಾಣ ಹಾಗೂ ಗೂಡು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದಾಗಿ ಕಚೇರಿ ಮನವಿ ಪತ್ರಗಳು ಬಂದಿವೆ. ಅಬಕಾರಿ ಇಲಾಖೆಗಳು ಶಿಸ್ತು ಕ್ರಮ ಕೈಗೊಳ್ಳದಿದ್ದರೆ, ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.
ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಕಳೆದ ಮಾರ್ಚ್ ನಿಂದ ಇಲ್ಲಿಯವರೆಗೆ ಚಿತ್ರದುರ್ಗ ತಾಲ್ಲೂಕಿನಲ್ಲಿ 144, ಹೊಳಲ್ಕೆರೆ 89, ಹೊಸದುರ್ಗ 91, ಹಿರಿಯೂರು 93, ಚಳ್ಳಕೆರೆ 122 ಹಾಗೂ ಮೊಳಕಾಲ್ಮೂರಿನಲ್ಲಿ 98 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಅಬಕಾರಿ ಅಧಿಕಾರಿ ಮಾಹಿತಿ ನೀಡಿದರು.
ವಾರ್ಷಿಕ ವರದಿ ಸಿದ್ದಪಡಿಸಿಕೊಳ್ಳಲು ಸೂಚನೆ:
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಗಳಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಜನೆಯಡಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ವಾರ್ಷಿಕ ವರದಿ ಸಿದ್ದಪಡಿಸಿ, ಸಮಾಜ ಕಲ್ಯಾಣ ಇಲಾಖೆ ಸಲ್ಲಿಸುವಂತೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೂಚಿಸಿದರು.
ತಾಲ್ಲೂಕು ಮಟ್ಟದಲ್ಲಿ ಕುಂದು ಕೊರತೆ ಸಭೆ :
ಉಪವಿಭಾಗಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ತಾಲ್ಲೂಕು ಮಟ್ಟದಲ್ಲಿ ಕುಂದು ಕೊರತೆ ಸಭೆಗಳನ್ನು ನಡೆಸಲು ಆದೇಶಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ದೌರ್ಜನ್ಯ ಪ್ರತಿಬಂಧಕ ಕಾಯ್ದೆಯ ಸಭೆಯ ನಂತರ, ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಜನರೊಂದಿಗೆ ಕುಂದುಕೊರತೆ ಸಭೆ ನಡೆಸಿ ಅವರು ಮಾತನಾಡಿದರು. ಸರ್ಕಾರ ಕುಂದು ಕೊರತೆ ಸಭೆ ನಡೆಸಲು ನಿದೇರ್ಶಿಸಿದೆ. ಮುಂದಿನ ತಿಂಗಳಿನಿAದ ಪ್ರತಿ ತಾಲ್ಲೂಕಿನಲ್ಲಿಯೂ ಸಭೆಗಳನ್ನು ಆಯೋಜಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಗುಜ್ಜಾರಪ್ಪ, ಎಂ.ಡಿ.ನವಕೋಟಿ, ಡಿ.ಓ.ಮೊರಾರ್ಜಿ, ಬೋರಸ್ವಾಮಿ, ಹೇಮೇಗೌಡ, ಜಿ.ಪಂ.ಸಿಪಿಓ ಗಾಯಿತ್ರಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಡಿಡಿಪಿಐ ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿತ್ತಿ ಚಿತ್ರಗಳ ಪೋಸ್ಟರ್ ಬಿಡುಗಡೆ :
ಮಕ್ಕಳ ಹಕ್ಕುಗಳು ಸಂರಕ್ಷಣೆ ಕುರಿತು ಆಶ್ರಿತ ಸಂಸ್ಥೆ ಹೊರ ತಂದಿರುವ ಬಿತ್ತಿ ಚಿತ್ರ ಹಾಗೂ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿಗಳು ಸಭೆಗೂ ಮುನ್ನ ಬಿಡುಗಡೆ ಮಾಡಿದರು. ಆಶ್ರಿತ ಸಂಸ್ಥೆ ನೆರೆಯ ತೆಲಂಗಾಣ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಬ್ಯಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ದತಿಗಳನ್ನು ತೊಡೆದು ಹಾಕಲು ಸರ್ಕಾರದೊಂದಿಗೆ ಕೈಜೊಡಿಸಿದೆ. ಈ ವೇಳೆ, ಆಶ್ರಿತ ಸಂಸ್ಥೆಯ ತಿಪ್ಪೇಸ್ವಾಮಿ, ಹರ್ಷವರ್ಧನ್, ಚಂದ್ರಣ್ಣ, ದೇವಿರಮ್ಮ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.ಸರ್




