ಹಿರಿಯೂರು, ಜೂನ್. 24 : ಹಣ ಪಡೆದು ವಸತಿ ಹಂಚಿಕೆ ಆರೋಪ ಎದುರಿಸುತ್ತಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ಆಗ್ರಹಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಕಳೆದ ಎರಡು ವರ್ಷಗಳಿಂದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದೇವೆ. ಆದರೆ ಅದನ್ನು ಸತ್ಯ ಗೊತ್ತಿದ್ದರೂ ಸಹ ಕಾಂಗ್ರೆಸ್ ಅಲ್ಲಗಳೆಯುತ್ತ ಬಂದರು. ಕ್ಷೇತ್ರಕ್ಕೆ ಮನೆ ಪಡೆಯಲು ಲಂಚ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಡಳಿತ ಪಕ್ಷದಲ್ಲಿರುವ ಕಾಂಗ್ರೆಸ್ ಶಾಸಕರೇ ನೇರವಾಗಿ ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಆರೋಪಿಸಿಲ್ಲ. ತಮ್ಮ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ಬಿಆರ್. ಪಾಟೀಲ ಅವರು ಆಡಿಯೋದಲ್ಲಿ ಮನೆ ಹಂಚಿಕೆ ಸಚಿವರ ವಿರುದ್ಧ ಸಿಡಿದೆದ್ದಾರೆ. ಬಡವರ ಮನೆ ಹಂಚಿಕೆ ಹೆಸರಿನಲ್ಲಿ ಹಣ ಪಡೆದ ಆರೋಪ ಎದುರಿಸುತ್ತಿರುವ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಮತ್ತು ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಬಿಆರ್ ಪಾಟೀಲ್ ಹೇಳಿರುವಂತೆ ಕ್ಷೇತ್ರಕ್ಕೆ ವಸತಿ ಹಂಚಿಕೆ ಮಾಡುವಂತೆ ಎರಡ್ಮೂರು ಬಾರಿ ಪತ್ರದ ಮೂಲಕ ಮನವಿ ಮಾಡಿದ್ದರೂ, ನನ್ನ ಗಮನಕ್ಕೆ ಬಾರದಂತೆ ನನ್ನ ಮತಕ್ಷೇತ್ರಕ್ಕೆ ಹಣ ಪಡೆದು 900 ಮನೆ ಕೊಟ್ಟಿದ್ದಾರೆ. ಹಿರಿಯ ಶಾಸಕರ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










