Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದ ಚಿತ್ರದುರ್ಗದ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂನ್. 24 : ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಇಸ್ರೇಲ್‍ನಲ್ಲಿ ಸಿಲುಕಿಕೊಂಡಿದ್ದ ಚಿತ್ರದುರ್ಗದ ವಿದ್ಯಾರ್ಥಿಯನ್ನು ಶಾಸಕರ ನೆರವಿನಿಂದ ಸುರಕ್ಷಿತವಾಗಿ ಕರೆತರಲಾಗಿದೆ.

ಈ ವಿಚಾರವನ್ನ ಜಬಿಉಲ್ಲಾ ಸಂಬಂಧಿಕರು ಶಾಸಕರ ಗಮನಕ್ಕೆ ತಂದಿದ್ದು ಶಾಸಕರು ದೆಹಲಿಯಲ್ಲಿ ಇರುವಂತಹ ಸಂಬಂಧ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಯುವಕನನ್ನ ರಕ್ಷಣೆ ಮಾಡಿಸಿದ್ದಾರೆ.‌ ಯುದ್ಧದ ನಡುವೆ ಸಿಕ್ಕಿಕೊಂಡ ಜಬಿಉಲ್ಲಾ ಎಂ.ಎ ಅವರಿಗೆ ಚಿತ್ರದುರ್ಗದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಫೋನ್ ಮೂಲಕ ಸಂಪರ್ಕಿಸಿ ಯೋಗ ಕ್ಷೇಮವನ್ನು ವಿಚಾರಿಸಿ ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆಸಿ, ಬೆಂಗಳೂರು ಮೂಲಕ ತನ್ನ ತಾಯ್ನಾಡು ಚಿತ್ರದುರ್ಗ ಜಿಲ್ಲೆಗೆ ಯುವಕನನ್ನ ಕರೆ ತಂದಿದ್ದಾರೆ.

ಚಿತ್ರದುರ್ಗ ಜಿಲ್ಲೆ ವ್ಯಕ್ತಿ ಜಬಿಉಲ್ಲಾ ಎಂ.ಎ ಅವರು ಇಸ್ರೇಲ್ ನಲ್ಲಿ ಎಂಎಸ್ಸಿ ( ಪರಿಸರ ಸೂಕ್ಷ್ಮ ಜೀವವಿಜ್ಞಾನ) ವಿದ್ಯಾಭ್ಯಾಸಕ್ಕೆ ತೆರಳಿದ್ದರು, ಈ ನಡುವೆ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಭಾರತೀಯ ಪ್ರಜೆಗಳನ್ನು ಭಾರತ ಸರ್ಕಾರ ರಕ್ಷಣೆ ಮಾಡಿ ದೆಹಲಿಗೆ ಕರೆತರಲಾಗಿತ್ತು, ಇದರಲ್ಲಿ ನನ್ನನು ಕೂಡ ದೆಹಲಿಯ ಕರ್ನಾಟಕ ಭವನದಲ್ಲಿ ಇರಿಸಲಾಗಿತ್ತು, ದೆಹಲಿಯಿಂದ ಬೆಂಗಳೂರಿಗೆ ಬರುವುದಕ್ಕೆ ಹಣ ನನ್ನ ಬಳಿ ಇರಲಿಲ್ಲ, ನನ್ನ ಅದೃಷ್ಟಕ್ಕೆ ಶಾಸಕರ ನನಗೆ ಕಾಲ್ ಮಾಡಿ ನನ್ನ ಯೋಗ ಕ್ಷೇಮವನ್ನು ವಿಚಾರಿಸಿ ತಮ್ಮ ಸ್ವಂತ ಖರ್ಚಿನಲ್ಲೇ ದೆಹಲಿಯಿಂದ ಬೆಂಗಳೂರುವರೆಗೆ ವಿಮಾನದಲ್ಲಿ ಬರುವುದಕ್ಕೆ ವ್ಯವಸ್ಥೆ ಹಾಗೂ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ನನ್ನನ್ನು ಕರೆಸಿಕೊಂಡಿದ್ದಾರೆ ಅವರಿಗೆ ಅನಂತ ಅನಂತ ಧನ್ಯವಾದಗಳು ಎಂದು ಜಬಿಉಲ್ಲಾ ಎಂ.ಎ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...