ಸುದ್ದಿಒನ್, ಚಿತ್ರದುರ್ಗ, ಜೂನ್. 26 : “ವಿದ್ಯಾರ್ಥಿಗಳು ವಿಜ್ಞಾನ ಅಧ್ಯಯನ ಮಾಡಿ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದರ ಮೂಲಕ ಸಂಶೋಧನೆಯ ಕಡೆಗೆ ಹೆಚ್ಚು ಒತ್ತು ನೀಡಲಿ” ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಖಗೋಳ ವಿಸ್ಮಯ” ಕುರಿತು ಉಪನ್ಯಾಸ ನೀಡಿದರು. “ವಿಜ್ಞಾನ ವಿಷಯವು ಕೇವಲ ಜ್ಞಾನಾರ್ಜನೆಗೆ ಸೀಮಿತವಾಗದೆ, ಬದುಕನ್ನು ಹಸನಾಗಿಸಬೇಕು ಹಾಗೂ ಸಮಾಜಕ್ಕೆ ಉಪಯುಕ್ತವಾಗಬೇಕು. ವಿದ್ಯಾರ್ಥಿಗಳು ಸೃಜನಾತ್ಮಕ ಹಾಗೂ ಆತ್ಮಸ್ಥೈರ್ಯ, ಕ್ರಿಯಾಶೀಲ ಮನೋಭಾವವನ್ನು ಬೆಳೆಸಿಕೊಂಡು ಹೊಸ ಹೊಸ ಸಂಶೋಧನೆಯ ಕಡೆಗೆ ಗಮನ ನೀಡಲಿ” ಎಂದು ಖಗೋಳ ವಿಸ್ಮಯ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಶ್ರೀ ರಾಘವೇಂದ್ರಚಾರ್, ಉಪನ್ಯಾಸಕರಾದ ರಮೇಶ್, ಹರೀಶ್ ಹಾಗೂ ಸೈನ್ಸ್ ಫೌಂಡೇಶನ್ ಖಜಾಂಚಿ ನಾಗಲಿಂಗರೆಡ್ಡಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











