ಚಿತ್ರದುರ್ಗ. ಜೂ.26: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 28ರಂದು ಬೆಳಿಗ್ಗೆ 10ಕ್ಕೆ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ರೈತರಿಗೆ ಕೃಷಿಯಲ್ಲಿ ನ್ಯಾನೋಯುರಿಯಾ, ನ್ಯಾನೋ ಡಿಎಪಿ ಹಾಗೂ ಡ್ರೋಣ್ ಬಳಕೆ ಕುರಿತು ಒಂದು ದಿನದತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಫ್ಕೋ ಸಂಸ್ಥೆಯ ಕ್ಷೇತ್ರ ಅಧಿಕಾರಿ ಚಿದಂಬರಮೂರ್ತಿ ಕುಲಕರ್ಣಿ ಅವರು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ನ್ಯಾನೋಯುರಿಯಾ ನ್ಯಾನೋ ಡಿಎಪಿ ಬಳಕೆಯ ಮಹತ್ವ ಹಾಗೂ ವಿವಿಧ ಕೃಷಿ ಮತ್ತುತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶ ಮತ್ತು ಪೀಡೆನಾಶಕ ಸಿಂಪರಣೆಗೆ ಡ್ರೋಣ್ ಬಳಸುವ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ನಂತರ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶ ಮತ್ತು ಪೀಡೆನಾಶಕ ಸಿಂಪರಣೆಗೆ ಡ್ರೋಣ್ ಬಳಕೆಯ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 50 ಜನರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 50 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಕೋರಿದ್ದಾರೆ.











