ಚಿತ್ರದುರ್ಗ. ಜೂ.26: ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು.
ನಗರದ ಅಮೃತ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಅಮೃತ್ ನರ್ಸಿಂಗ್ ಕಾಲೇಜು ಸಹಯೋಗದೊಂದಿಗೆ ವಿಶ್ವ ಮಾದಕದ್ರವ್ಯ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂನ್ 26ರಂದು ವಿಶ್ವ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಸೆಪ್ಟೆಂಬರ್ 7, 1987 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಾದಕ ವಸ್ತುಗಳ ದುರುಪಯೋಗ ಮತ್ತು ಕಳ್ಳಸಾಗಾಣಿಕೆ ತಡೆಗಟ್ಟಲು ನಿರ್ದಿಷ್ಟ ಆಚರಣೆ ಜಾರಿಗೆ ತರಬೇಕು ಎಂದು ಒಂದು ನಿರ್ಣಯ ಅಂಗೀಕರಿಸಿತು. ಅದರಂತೆ ಪ್ರತ ವರ್ಷ ಜೂನ್ 26 ರಂದು ಅಕ್ರಮ ಮಾದಕ ವಸ್ತುಗಳ ಬಗ್ಗೆ ಮತ್ತು ಅವು ಸಮಾಜಕ್ಕೆ ತರುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಅರಿವು ಮೂಡಿಸಲು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮಾನಸಿಕ ಆರೋಗ್ಯ ವಿಭಾಗದ ಮಾನಸಿಕ ತಜ್ಞ ಡಾ.ಶ್ರೀಧರ್ ಮಾತನಾಡಿ, ಈ ವರ್ಷದ ಘೋಷ ವಾಖ್ಯಾ “ಕೊಂಡಿಗಳನ್ನು ಕತ್ತರಿಸಿ, ತಡೆಗಟ್ಟುವಿಕೆ ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಬಲ ಪಡಿಸೋಣ ಎನ್ನುವುದಾಗಿದೆ ಎಂದು ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಗಾಯಿತ್ರಿ ಶಿವರಾಮ್ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆ ಸಮಾಜಮುಖಿಯಾಗಿ ಕಾರ್ಯ ಮೊದಲಿನಿಂದಲೂ ಮಾಡುತ್ತಾ ಬಂದಿದೆ. ಅದರಂತೆ ನಶಾ ಮುಕ್ತ ಸಮಾಜ ನಿರ್ಮಿಸಲು ಅರಿವು ಮೂಡಿಸಲು ಯೋಜನೆ ಸಿದ್ದಪಡಿಸಿ ಕಾರ್ಯೋನ್ಮುಖ ವಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ವಜಹತ್ತುಲ್ಲಾ ಮಾತನಾಡಿ, ಮೊದಲು ನೀವು ನಿಮ್ಮ ಕುಟುಂಬದ ಸದಸ್ಯರು ನಂತರ ಸಮುದಾಯದಲ್ಲಿ ವ್ಯಸನ ಮುಕ್ತ ಮಾಡಲು ಪ್ರಯತ್ನ ನಡೆಯಲಿ ಎಂದು ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ರೆಡ್ ಕ್ರಾಸ್ ಸಂಸ್ಥೆಯವರು ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎನ್.ಮಜಹರ್ ಉಲ್ಲಾ, ಸದಸ್ಯ ಶಿವರಾಮ್, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











