ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಚಿತ್ರದುರ್ಗ ಜಿಲ್ಲಾ ರೆಡ್ಡಿ ಸಂಘದ ವತಿಯಿಂದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ರೆಡ್ಡಿ ಸಮುದಾಯದ ಮಕ್ಕಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90% ಅಂಕಪಡೆದವರಿಗೆ, ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ 85% ಅಂಕ ಪಡೆದವರಿಗೆ ಪ್ರತಿಭಾಪುರಸ್ಕಾರ ನೀಡಲಾಗುವುದು. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ದೃಢೀಕರಿಸಿದ ಅಂಕಪಟ್ಟಿ, ಆಧಾರ್ಕಾರ್ಡ್, ಟಿ.ಸಿ. ಮತ್ತು ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ನಗರದ ಬಿ.ಡಿ. ರಸ್ತೆಯಲ್ಲಿರುವ ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ಕಛೇರಿಗೆ ದಿನಾಂಕ:01-07-2025 ರಿಂದ 30-09-2025 ರೊಳಗಾಗಿ ಸಲ್ಲಿಸಲು ಕಾರ್ಯದರ್ಶಿಗಳಾದ ಜೆ.ಪರಶುರಾಮ ಮತ್ತು ಶ್ರೀಮತಿ ಡಿ.ಕೆ.ಶೀಲಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9686555383
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











