Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಾಮರಾಜನಗರದಲ್ಲಿ ಹುಲಿಗಳ ಸಾವು : ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

---Advertisement---

ಬೆಂಗಳೂರು: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮ ಕೊಪ್ಪ ವಲಯದಲ್ಲಿ ಐದು ಹುಲಿಗಳು ಸಾವನ್ನಪ್ಪಿವೆ. ಈ ದೃಶ್ಯವನ್ನು ಕಂಡವರು ಅಯ್ಯೋ ಅಂತಿದ್ದಾರೆ. ಮರಿ ಹುಲಿಗಳು ಸಾವನ್ನಪ್ಪಿವೆ. ಈಗಾಗಲೇ ತನಿಖೆ ಶುರುವಾಗಿದ್ದು, ನಾಲ್ವರನ್ನು ವಶಕ್ಕೂ ಪಡೆಯಲಾಗಿದೆ. ಇದೀಗ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಕೆಂಪೇಗೌಡರ 516ನೇ ಜಯಂತಿಯನ್ನು ಆಚರಣೆ ಮಾಡಿದ್ದು, ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಗೆ ಆದೇಶ ನೀಡಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಹುಲಿಗಳ ಸಾವಿನ ಬಗ್ಗೆ ಡಿಸಿಎಫ್ ಚಕ್ರಪಾಣಿ ಮಾಹಿತಿ ನೀಡಿದ್ದು, ನಮ್ಮ ಸಿಬ್ಬಂದಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಗಸ್ತು ತಿರುಗುತ್ತಿದ್ದರು. ಈ ವೇಳೆ ಹುಲಿ ಬಿದ್ದಿದ್ದು ಗಮನಕ್ಕೆ ಬಂದಿದೆ. ಮತ್ತೆ ಅಲ್ಲಿ ನೋಡಿದಾಗ ಒಂದು ಹಸಿವಿನ ಕಳೆಬರಹ ಕಂಡು ಬಂದಿದೆ. ಮೇಲ್ನೋಟಕ್ಕೆ ಅಲ್ಲೊಂದು ಹಸು ಕೂಡ ಸತ್ತಿರುವ ಕಾರಣ ಇದೊಂದು ಅಸಹಜ ಸಾವು ಎಂಬಂತೆ ಕಾಣಿಸುತ್ತಿದೆ. ಪರೀಕ್ಷೆ ನಡೆಸಿ ವರದಿ ಬಂದ ನಂತರ ಸತ್ಯ ಗೊತ್ತಾಗಲಿದೆ.

ವೈಜ್ಞಾನಿಕ ಪ್ರಯೋಗಾಲಯದ ಪರೀಕ್ಷೆಯಲ್ಲಿ ಸತ್ಯ ಗೊತ್ತಾಗಲಿದೆ. ನಂತರ ಮುಂದಿನ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ. NTCA ಗೈಡ್​ಲೆನ್ಸ್ ಪ್ರಕಾರ ಎಲ್ಲ ಹುಲಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಎಲ್ಲವು ಚಿಕ್ಕ ಮರಿಗಳಾದ ಕಾರಣ ಬೇಟೆಗೆ ತಾಯಿಯನ್ನೇ ಅವಲಂಬಿಸಿದ್ದವು. ಇದು ಟೆರಿಟರಿಗಾಗಿ ನಡೆದಿರುವ ಘಟನೆ ಅಲ್ಲ ಎಂದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಈ ಹಿಂದೆ ಹುಲಿದಾಳಿಯಂತಹ ಯಾವುದೇ ಪ್ರಕರಣಗಳು ಇಲ್ಲಿ ದಾಖಲಾಗಿಲ್ಲ. ಇದೇ ಮೊದಲ ಬಾರಿಗೆ ಘಟನೆ ನಡೆದಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...