Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉತ್ತಮ ಪರಿಸರ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಅಭಿವೃದ್ಧಿ: ಎಚ್.ಎಸ್.ಟಿ.ಸ್ವಾಮಿ

---Advertisement---

 

ಸುದ್ದಿಒನ್, ಚಳ್ಳಕೆರೆ, ಜೂನ್. 27 : ವಿದ್ಯಾರ್ಥಿಗಳು ತಮ್ಮ ಶಾಲೆಯ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ಮುಂದಾಗಬೇಕು”ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಕಿವಿಮಾತು ಹೇಳಿದರು.

ತಾಲ್ಲೂಕಿನ ಕಾಲುವೇಹಳ್ಳಿ ಶ್ರೀ ಪಟೇಲ್ ಪಾಲಯ್ಯ ಪ್ರೌಢಶಾಲೆಯಲ್ಲಿ “ಪರಿಸರ ಸಂರಕ್ಷಣೆ” ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ” ಪರಿಸರ ಸಂರಕ್ಷಣೆ ಕಾರ್ಯಕ್ರಮ ಕೇವಲ ಜೂನ್ ತಿಂಗಳಿಗೆ ಮಾತ್ರ ಸೀಮಿತವಾಗದೇ ವರ್ಷಪೂರ್ತಿ ನಿರಂತರವಾಗಿ ನಡೆಯುತ್ತಿರಬೇಕು. ಜೀವನದಲ್ಲಿ ಸಸ್ಯಗಳನ್ನು ಬೆಳೆಸಿ ಅವುಗಳನ್ನು ಉಳಿಸಿಕೊಂಡು ಹೋಗುವ ಮನೋಭಾವ ಬೆಳೆಸಿಕೊಳ್ಳಿ. ಉತ್ತಮ ಪರಿಸರ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಅಭಿವೃದ್ಧಿ ಸಾಧ್ಯ” ಎಂದು ಹೇಳಿ, ಆಟ ಪಾಠಗಳ ಜೊತೆಗೆ ವೈಜ್ಞಾನಿಕ ಮನೋಭಾವ, ವೈಜ್ಞಾನಿಕ ಚಿಂತನೆ ಬೆಳೆಸುವತ್ತ ಶಿಕ್ಷಕರು ಮುಂದಾಗಬೇಕು. ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸೈನ್ಸ್ ಫೌಂಡೇಶನ್ ಖಜಾಂಚಿ ಕೆ.ವಿ.ನಾಗಲಿಂಗರೆಡ್ಡಿ ಮಾತನಾಡಿ, “ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ. ಪರಿಸರವನ್ನು ಉಳಿಸಿದರೆ ಮನುಕುಲ ಉಳಿಯುತ್ತದೆ. ಭವಿಷ್ಯದ ಜೀವಸಂಕುಲ ಇಂದಿನ ವಿದ್ಯಾರ್ಥಿಗಳ ಮನೋಧರ್ಮದ ಮೇಲೆ ನಿಂತಿದೆ. ತಂದೆ ತಾಯಿ, ಗುರುಹಿರಿಯರಿಗೆ ಗೌರವ ನೀಡುವ ಶಿಕ್ಷಣ ಕಲಿಸುವುದು ಇಂದಿನ ಅಗತ್ಯತೆ” ಎಂದು ತಿಳಿಸಿದರು.

ಶಾಲಾ ಆವರಣದಲ್ಲಿ ವಿವಿಧ ಬಗೆಯ ಸಸ್ಯಗಳನ್ನು ವಿದ್ಯಾರ್ಥಿಗಳ ಸಹಯೋಗದೊಂದಿಗೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಶಿಕ್ಷಕ ಚಾಂದ್ ಭಾಷ ಸ್ವಾಗತಿಸಿ,ಗಣಿತ ಶಿಕ್ಷಕರ ವಿಜಯಕುಮಾರ್ ವಂದಿಸಿದರು. ಶಿಕ್ಷಕ ಹನುಮಂತರೆಡ್ಡಿ ಕಾರ್ಯಕ್ರಮ ನಿರೂಪಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...