Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ಡಿ.ವೈ.ಎಸ್ಪಿ. ದಿನಕರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 27 : ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳಬಾರದೆಂದು ಡಿ.ವೈ.ಎಸ್ಪಿ. ದಿನಕರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 

ಸರ್ಕಾರಿ ಕಲಾ ಕಾಲೇಜು ಮತ್ತು ವಿಜ್ಞಾನ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.
ಮಾದಕ ವಸ್ತುಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚು ಆಕರ್ಷಿತರಾಗುವುದು ಸಹಜ. ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯ ಪೂರ್ಣ ಸಮಾಜ ನಿರ್ಮಿಸಬೇಕಾಗಿರುವುದರಿಂದ ಜಿಲ್ಲೆಯನ್ನು ನಶೆಮುಕ್ತವನ್ನಾಗಿಸುವಂತೆ ಮನವಿ ಮಾಡಿದರು.
ಎಲ್ಲಿಯಾದರೂ ಮಾದಕ ವಸ್ತುಗಳ ಸೇವನೆ ಕಂಡುಬಂದಲ್ಲಿ ಕಾನೂನು ಅಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದರು.‌ ಬಡಾವಣೆ ಠಾಣೆ ಇನ್ಸ್‌ಪೆಕ್ಟರ್ ತಿಮ್ಮಣ್ಣ, ಸಬ್‍ ಇನ್ಸ್‌ಪೆಕ್ಟರ್ ರಘು ಇವರುಗಳು ವೇದಿಕೆಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment