Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ. 29ಕ್ಕೆ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ” : ನಾಗರಾಜ್ ಸಂಗಂ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್

ಚಿತ್ರದುರ್ಗ,(ಡಿ.27) : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ. 29ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ”, ವಿಶ್ವಮಾನವ ದಿನಾಚರಣೆ, ರಾಜ್ಯಮಟ್ಟದ “ಎಚ್.ಎನ್.ಪ್ರಶಸ್ತಿ” ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‍ನ ಜಿಲ್ಲಾಧ್ಯಕ್ಷರಾದ ನಾಗರಾಜ್ ಸಂಗಂ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 29ರಂದು ಸಮಾಜಮುಖಿ ಚಿಂತಕರ ಜತೆಗೂಡಿ ಆರಂಭಿಸಿದ ಸಂಸ್ಥೆಯು ಒಂದು ವರ್ಷ ಪೂರೈಸುತ್ತಿರುವ ವಿಶೇಷ ಸಂದರ್ಭದಲ್ಲಿ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಸಮಿತಿ ಹೊಂದಿರುವ ಪರಿಷತ್‍ನಲ್ಲಿ ಐವತ್ತು ಸಾವಿರಕ್ಕೂ ಹೆಚ್ಚಿನ ಸದಸ್ಯರು ಇದ್ದಾರೆ ಎಂದರು.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ “ಹೆಚ್.ಎನ್” ಪ್ರಶಸ್ತಿ ನೀಡಲಾಗುತ್ತಿದೆ. ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರು ಹಾಗೂ ಮರಣೋತ್ತರವಾಗಿ ಪುನಿತ್ ರಾಜ್‍ಕುಮಾರ್ ಅವರಿಗೆ ನೀಡಲಾಗುತ್ತಿದೆ. ಶೈಕ್ಷಣಿಕ ಜಿಲ್ಲಾವಾರು ಎಚ್.ಎನ್.ಪ್ರಶಸ್ತಿ ನೀಡಲಾಗುತ್ತಿದ್ದು ಚಿತ್ರದುರ್ಗ ಜಿಲ್ಲೆಯಿಂದ ಹೆಚ್.ಎಸ್.ಟಿ.ಸ್ವಾಮಿಯವರಿಗೆ ಪ್ರಧಾನ ಮಾಡಲಾಗುವುದು ಎಂದು ನಾಗರಾಜ್ ಸಂಗಂ ತಿಳಿಸಿದರು.

ಜನಸಾಮಾನ್ಯರಲ್ಲಿ ವ್ಶೆಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳ ಜಾಗೃತಿ ಮೂಡಿಸುವುದು, ಮೌಢ್ಯವನ್ನು ದೂರ ಮಾಡುವುದು, ವಿಜ್ಞಾನ, ಸಾಮಾಜಿಕ, ಸಾಂಸ್ಕøತಿಕ, ಸಾಹಿತ್ಯ ಶಿಕ್ಷಣ ಹೀಗೆ ಹತ್ತು ಹಲವಾರು ಜನಪರ ಕಾರ್ಯಯೋಜನೆಗಳೊಂದಿಗೆ ವಿಶ್ವ ಗಮನ ಸೆಳೆಯುವ “ವಿಜ್ಞಾನ ಗ್ರಾಮ” ನಿರ್ಮಾಣ ಮಾಡುವ ಕನಸು ಹೊತ್ತ ಸಂಸ್ಥೆಗೆ ಅನೇಕರು ಕೈ ಜೋಡಿಸಿದ್ದಾರೆ. ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ಶಿವಮೊಗ್ಗ ಜಿಲ್ಲೆಯಿಂದ ಆರಂಭವಾಗುತ್ತಿರುವುದು ವಿಶೇಷ ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ದೊಡ್ಡಣ್ಣ, ಸಮಾಜ ಸೇವಕ ಡಾ. ಶ್ರೀಧರ್ ಕುಮಾರ್ ತಿಪಟೂರು, ಪದ್ಮನಾಭ ಗೌಡ ಬೆಂಗಳೂರು, ಜಿ.ಡಿ.ನಂದಿನಿ ಮೋಹನ್‍ಕುಮಾರ್ ತುಮಕೂರು, ವೈದ್ಯ ಡಾ. ಟಿ.ಹೆಚ್.ಆಂಜನಪ್ಪ ಬೆಂಗಳೂರು, ತುಮಕೂರಿನ ದಿಲೀಪ್ ಕುಮಾರ್ ಅವರಿಗೆ “ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ” ನೀಡಿ ಗೌರವಿಸಲಾಗುವುದು.

ಸಿಎಂ ಉದ್ಘಾಟನೆ: ಡಿ. 29ರ ಬೆಳಗ್ಗೆ 10ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸುವರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಆಶಯ ನುಡಿಗಳನ್ನಾಡುವರು. ಇಸ್ರೋ ಮಾಜಿ ಅಧ್ಯಕ್ಷ, ವಿಜ್ಞಾನಿ ಡಾ. ಎ.ಎಸ್.ಕಿರಣ್ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷರ ನುಡಿಗಳನ್ನಾಡುವರು. ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಜ್ಞಾನ ಸಿರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಂಸ್ಥೆಯ ಸದಸ್ಯತ್ವ ಅಪ್ಲಿಕೇಷನ್ ಬಿಡುಗಡೆ ಮಾಡುವರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು 2022ರ ದಿನಚರಿ ಬಿಡುಗಡೆಗೊಳಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ವಿಜ್ಞಾನ ಗ್ರಾಮಕ್ಕೆ ಚಾಲನೆ ನೀಡುವರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪರಿಷತ್‍ನ ವೆಬ್‍ಸೈಟ್ ಲೋಕಾರ್ಪಣೆಗೊಳಿಸಲಿದ್ದಾರೆ ಎಂದರು.

ರಾಜ್ಯ ಮಟ್ಟದ ವಿಚಾರಗೋಷ್ಠಿ: ಮಧ್ಯಾಹ್ನ 2ಕ್ಕೆ ವಿಶ್ವ ಕವಿ ಕುವೆಂಪು ಹಾಗೂ ಎಚ್.ನರಸಿಂಹಯ್ಯ ಅವರ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಉದ್ಘಾಟಿಸುವರು. ನೆಲದ ಕವಿ ಕುವೆಂಪು ಹಾಗೂ ಎಚ್.ಎನ್ ಕುರಿತು ಸಾಹಿತಿ ಡಾ. ಕುಂ.ವೀರಭದ್ರಪ್ಪ ಮಾತನಾಡುವರು. ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ ಅಧ್ಯಕ್ಷತೆ ಸಹಿಸುವರು. ಸಂಜೆ 4ಕ್ಕೆ ರಾಜ್ಯ ಮಟ್ಟದ ಮಹಾ ಅಧಿವೇಶನ ನಡೆಯಲಿದೆ.

ರಾಜ್ಯಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ”ದ ಸಮಾರೋಪ ಸಮಾರಂಭ ಡಿ. 29ರ ಸಂಜೆ 5ಕ್ಕೆ ನಡೆಯಲಿದೆ. ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾಶರಣರು ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್‍ಕುಮಾರ್ ಅವರು ರಾಜ್ಯಮಟ್ಟದ “ಎಚ್.ಎನ್” ಪ್ರಶಸ್ತಿ ಪ್ರದಾನ ಮಾಡುವರು. ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಸಮಾರೋಪ ನುಡಿಗಳನ್ನಾಡುವರು.

ಸಂಜೆ 6ಕ್ಕೆ ಹರಟೆ ಖ್ಯಾತಿ ಇಂದುಮತಿ ಸಾಲಿಮಠ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಿದೆ. ಡಿ. 29ರ ಬೆಳಗ್ಗೆ ಕುಪ್ಪಳ್ಳಿಯಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ರಾಮಾಯಣ ದರ್ಶನಂ ಕೃತಿಯೊಂದಿಗೆ ವ್ಶೆಜ್ಞಾನಿಕ ಜಾತಾ ಆಗಮಿಸಲಿದೆ.

ಗೋಷ್ಟಿಯಲ್ಲಿ ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶೀ ಲೋಕೇಶ್, ಸಂಘಟನಾ ಕಾರ್ಯದರ್ಶೀ ರಂಗಪ್ಪ, ಪದಾಧಿಕಾರಿಗಳಾದ ಲವಕುಮಾರ್, ಹಾಲ ಸಿದ್ದಪ್ಪ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!