Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಜೆಜಿ ಹಳ್ಳಿ ನೀರಿಗಾಗಿ ಜೂಲೈ 7ರಂದು ರೈತರ ಉಪವಾಸ ಸತ್ಯಾಗ್ರಹ ಆರಂಭ

---Advertisement---

ಸುದ್ದಿಒನ್, ಹಿರಿಯೂರು, ಜೂನ್. 28  : ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿ ಹೋಬಳಿ ಗ್ರಾಮಗಳ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸಭೆ ನಡೆಸಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆಟಿ. ತಿಪ್ಪೇಸ್ವಾಮಿ ಮಾತನಾಡಿ ಕಲ್ಲುವಳ್ಳಿ ಭಾಗದಲ್ಲಿ ನೀರಿಲ್ಲದೆ ರೈತರ ಬದುಕು ಚಿಂತಾಜನಕವಾಗಿದೆ. ಇತ್ತ ಮಳೆ ಬಾರದೇ ಇರುವುದರಿಂದ ರೈತರ ಅಡಿಕೆ, ಬಾಳೆ, ತೆಂಗಿನ ತೋಟಗಳು ಒಣಗಿ ಹೋಗುತ್ತಿವೆ.‌ ಜೊತೆಗೆ ಕುಡಿಯಲು ನೀರು ಇಲ್ಲದೆ ಜಾನುವಾರುಗಳಿಗೆ ತೀವ್ರತರವಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನೀರಿಗಾಗಿ ಆಗ್ರಹಿಸಿ 255 ದಿನ ರೈತರು ಅನೇಕ ಚಳುವಳಿಗಳ ಮೂಲಕ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದಿದ್ದಕ್ಕೆ, ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮೂರು ತಿಂಗಳ ಒಳಗಾಗಿ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿ ಕಾಮಗಾರಿ ಶುರು ಮಾಡುತ್ತವೆ ಅವಶ್ಯಕತೆ ಇದ್ದಲ್ಲಿ ನಿಮ್ಮ ನಿಯೋಗವನ್ನು ಕರೆದುಕೊಂಡು ಸರ್ಕಾರದೊಂದಿಗೆ ಸಭೆ ನಡೆಸುತ್ತೇನೆ ನನ್ನ ಮಾತಿನ ಮೇಲೆ ಭರವಸೆ ಇಟ್ಟು ಉಪವಾಸ ಸತ್ಯಾಗ್ರಹ ಕೈ ಬಿಡಿ ಎಂದು ಮನವಿ ಮಾಡಿದರು ಅವರ ಮಾತಿಗೆ ಸ್ಪಂದಿಸಿ ಧರಣಿ ಉಪವಾಸ ಸತ್ಯಾಗ್ರಹಣ ಹಿಂತೆಗೆದುಕೊಳ್ಳಲಾಯಿತು. ಸಣ್ಣ ನೀರಾವರಿ ಇಲಾಖೆಯಿಂದ ಹಣ ಬಿಡುಗಡೆಗೆ ಕಳೆದ ಬಜೆಟ್ ನಲ್ಲಿ ಕಾಯ್ದಿರಿಸಲಾಗಿದೆ. ಆದರೆ ವಾಣಿ ವಿಲಾಸ ಜಲಾಶಯದಿಂದ ನೀರಿನ ಹಂಚಿಕೆ ಆಗದಿರುವುದರಿಂದ ಮತ್ತೆ ಕಾಮಗಾರಿ ನೆನೆಗುದಿಗೆ ಬಿಳುವಂತಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ನೀರಿನ ಹಂಚಿಕೆ ಮಾಡಿಸಿ ಕಾಮಗಾರಿ ಆರಂಭ ಮಾಡಬೇಕು ಇಲ್ಲದಿದ್ದರೆ ಜೂಲೈ 7ರಂದು ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕೆಟಿ ತಿಪ್ಪೇಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಆಲೂರು ಸಿದ್ದರಾಮಣ್ಣ, ಜೆಜಿ ಹಳ್ಳಿ ಹೋಬಳಿ ಅಧ್ಯಕ್ಷ ಈರಣ್ಣ ಇತರರು ಮಾತನಾಡಿದರು. ಈ ಸಂದರ್ಭದಲ್ಲಿ ಎಂಆರ್. ಈರಣ್ಣ, ಕೆಆರ್. ಹಳ್ಳಿ ರಾಜಪ್ಪ, ರಾಜು ಕುಮಾರ, ಚಂದ್ರಪ್ಪ, ತಿಮ್ಮಣ್ಣ, ತಿಪ್ಪೇಸ್ವಾಮಿ, ಮಹಾಲಿಂಗಪ್ಪ, ಜಯರಾಮಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...