Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಪಿಗಳನ್ನು ಅರೆಸ್ಟ್ ಮಾಡಿಕೊಂಡು ಬರುವಾಗ ಇನ್ಸ್‌ಪೆಕ್ಟರ್ ಸಾವು : ಬೆಂಗಳೂರಿನಲ್ಲಿ ದುರಂತ..!

---Advertisement---

ಬೆಂಗಳೂರು: ಸಾವು ಯಾವಾಗ ಬರುತ್ತೆ ಅನ್ನೋದೆ ಗೊತ್ತಾಗಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಆಕ್ಸಿಡೆಂಟ್, ಹಾರ್ಟ್ ಅಟ್ಯಾಕ್ ನಿಂದ ಸಾಯುತ್ತಿರುವವರ ಸಂಖ್ಯೆ ಜಾಸ್ತಿಯಾಗಿದೆ. ಇಂದು ಆರೋಪಿಗಳನ್ನ ಅರೆಸ್ಟ್ ಮಾಡಿಕೊಂಡು ಬರುವಾಗ ಅಪಘಾತ ಸಂಭವಿಸಿ, ಇನ್ಸ್‌ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೂರ್ಯ ಸಿಟಿ ಬಳಿ ನಡೆದಿದೆ.

ಜೂನ್ 24ರಂದು ಗಾಂಜಾ ಕೇಸ್ ಒಂದರಲ್ಲಿ ಅತ್ತಿಬೆಲೆಯಲ್ಲಿ ಆರೋಪಿಗಳನ್ನ ಬಂಧಿಸಿದ್ದರು. ಬಳಿಕ ಆರೋಪಿಗಳನ್ನ ಕರೆ ತರುತ್ತಿದ್ದರು. ಆದರೆ ಸ್ವಲ್ಪ ಸಮಯ ಕಾರು ನಿಲ್ಲಿಸಿ, ಸಬ್ ಇನ್ಸ್‌ಪೆಕ್ಟರ್ ಮೈಬೂಬ್ ಗುಡ್ಡಳ್ಳಿ ಅವರು ಕೆಳಗೆ ಇಳಿದಿದ್ದಾರೆ. ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಅಪಘಾತ ನಡೆದಿದೆ. ಹಿಂಬದಿಯಿಂದ ವೇಗವಾಗಿ ಬಂದ ಲಾರಿ, ಇನ್ಸ್‌ಪೆಕ್ಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ.

ಅಪಘಾತ ನಡೆದದ್ದನ್ನು ಕಂಡವರು ಮೈಬೂಬ್ ಗುಡ್ಡಳ್ಳಿ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಅಪಘಾತದ ತೀವ್ರತೆಗೆ ಮೈಬೂಬ್ ಗುಡ್ಡಳ್ಳಿ ಪ್ರಾಣ ಬಿಟ್ಟಿದ್ದಾರೆ. ಈ ಘಟನೆಯ ಬಳಿಕ ಆರೋಪಿಗಳಿಗೆ ಒಳ್ಳೆ ಸಮಯವೇ ಸಿಕ್ಕಂತೆ ಆಗಿದೆ. ಇನ್ಸ್‌ಪೆಕ್ಟರ್ ಆಕ್ಸಿಡೆಂಟ್ ಆದ ಕೂಡಲೇ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಮೈಬೂಬ್ ಗುಡ್ಡಳ್ಳಿ ನಿಧನಕ್ಕೆ ಇಡೀ ಪೊಲೀಸ್ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಕುಟುಂಬಸ್ಥರಿಗೆ ಈ ನೋವನ್ನ ತಡೆದುಕೊಳ್ಳುವ ಶಕ್ತಿ ಭಗವಂತನೇ ಕೊಡಲಿ ಎಂದು ಎಲ್ಲರು ಪ್ರಾರ್ಥನೆ ಮಾಡಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಈ ರೀತಿಯಾಗಿ ಸಾವು ಬಂದಿದೆ. ಈಗಂತು ದಿನ ಬೆಳಗ್ಗೆ ಆದ್ರೆ ಅಲ್ಲಿ ಸಾವು, ಇಲ್ಲಿ ಸಾವು ಅಂತ ಕೇಳಿ ಕೇಳಿನೆ ಜನಕ್ಕೆ ಆತಂಕ ಸೃಷ್ಟಿಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment