ಚಿತ್ರದುರ್ಗ | ಡಿ.28 ರಂದು ವಿದ್ಯುತ್ ವ್ಯತ್ಯಯ

suddionenews
1 Min Read

 

ಚಿತ್ರದುರ್ಗ,(ಡಿಸೆಂಬರ್.27) : 220/66/11 ಕೆ.ವಿ ಸ್ವೀಕರಣಾ ಕೇಂದ್ರ ಮತ್ತು ಉಪಕೇಂದ್ರಗಳ ವಿಭಾಗ ಚಿತ್ರದುರ್ಗ ವ್ಯಾಪ್ತಿಯಲ್ಲಿ ಬರುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಾದ ಹೊಳಲ್ಕೆರೆ ಮತ್ತು ರಾಮಗಿರಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಿರ್ವಹಿಸುವುದರಿಂದ ಡಿಸೆಂಬರ್ 28ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಗೊಳಪಡುವ ಪ್ರದೇಶಗಳು: 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಾದ ಹೊಳಲ್ಕೆರೆ ಮತ್ತು ರಾಮಗಿರಿಯಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 66 ಕೆ.ವಿ ಮಾರ್ಗ, ಐಪಿಪಿ ಸ್ಥಾವರಗಳ ಮಾರ್ಗಗಳು ಮತ್ತು 11 ಕೆ.ವಿ ಮಾರ್ಗಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *