ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಅರೆಸ್ಟ್ ಆಗಿದ್ದರು. ಬಳಿಕ ಪ್ರಕರಣದಲ್ಲಿ ಶ್ರೀಗಳು ಜಾಮೀನು ಪಡೆದು ಹೊರಗೆ ಬಂದಿದ್ದರು. ಆದರೆ ಚಿತ್ರದುರ್ಗಕ್ಕೆ ಹೋಗುವುದಕ್ಕಾಗಲಿ, ಮಠದ ಆಡಳಿತದಲ್ಲಿ ಅಧಿಕಾರ ಚಲಾಯಿಸುವುದಕ್ಕಾಗಲಿ ಯಾವುದೇ ಅನುಮತಿ ಇರಲಿಲ್ಲ. ಕೆಲವೊಂದು ಸಹಿ ಬೇಕೇ ಬೇಕು ಎಂದಾಗ ಮಠದ ಆಡಳಿತ ಮಂಡಳಿ ಜೈಲಿಗೆ ಬಂದು ಸಹಿ ಹಾಕಿಸಿಕೊಂಡು ಹೋದ ಉದಾಹರಣೆಗಳು ಇದಾವೆ. ಆದರೆ ಈಗ ಮಠದ ಭಕ್ತರಿಗೆ ಸಂತಸದ ವಿಷಯವೊಂದು ಹೊರ ಬಿದ್ದಿದೆ. ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಚಿತ್ರದುರ್ಗಕ್ಕೆ ಬರಲು ಕೋರ್ಟ್ ಅನುಮತಿ ನೀಡಿದೆ.
ಪೋಕ್ಸೋ ಕೇಸ್ ನಲ್ಲಿ ಜಾಮೀನು ಪಡೆದು ಹೊರಗೆ ಬಂದ ಬಳಿಕ ಶ್ರೀಗಳು ದಾವಣಗೆರೆಯಲ್ಲಿ ವಾಸವಾಗಿದ್ದರು. ಈ ಕೇಸ್ ಸಂಬಂಧ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 12 ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿದೆ. ಎ-1 ಆರೋಪಿ ಸ್ಥಾನದಲ್ಲಿರುವ ಶ್ರೀಗಳ ಸಾಕ್ಷ್ಯ ವಿಚಾರಣೆ ಕೂಡ ಮುಕ್ತಾಯವಾಗಿದೆ. ಈಗ ಖುದ್ದು ಹೇಳಿಕೆಗೆ ದಿನಾಂಕ ನಿಗದಿ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಲು ಜುಲೈ 3 ರಂದು ಚಿತ್ರದುರ್ಗಕ್ಕೆ ಆಗಮಿಸಿಲಿದ್ದಾರೆ. ಇದು ಇಡೀ ಭಕ್ತವೃಂದಕ್ಕೆ ಸಂತಸ ತಂದ ವಿಚಾರವಾಗಿದೆ.
ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಸೋಮವಾರ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದು, ಶಿವಮೂರ್ತಿ ಮುರುಘಾ ಶರಣರ ಹೇಳಿಕೆಗೆ ಜುಲೈ 3 ರಂದು ದಿನಾಂಕ ನಿಗದಿ ಮಾಡಿದೆ. ಮುರುಘಾಶ್ರೀ ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲಿಸಿ, ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಇದೀಗ ಶ್ರೀಗಳ ಆಗಮನಕ್ಕೆ ಭಕ್ತವೃಂದ ಎಲ್ಲಾ ತಯಾರಿ ಮಾಡಿಕೊಂಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















