Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಆರ್​​ಎಸ್​ಎಸ್ ಬ್ಯಾನ್, ಪ್ರಿಯಾಂಕಾ ಖರ್ಗೆ ಹೇಳಿಕೆ ಖಂಡನಿಯ : ಕೆ. ಅಭಿನಂದನ್

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 02  : ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಆರ್​​ಎಸ್​ಎಸ್ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ತಿರ್ಮಾನ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕಾ ಖರ್ಗೆ ಹೇಳಿಕೆಯನ್ನು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ ಅಭಿನಂದನ್ ಖಂಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಕೋಟ್ಯಂತರ ಸ್ವಯಂ ಸೇವಕರನ್ನು ಹೊಂದಿರುವ ಈ ಸಂಘಟನೆ ವಿಶ್ವದ ಮಹಾನ್ ದೇಶಭಕ್ತರ ಸಂಘಟನೆಯಾಗಿದೆ. ಇದನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಜನರಿಗೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಸದಾ ದೇಶ ಸೇವೆಗೆ ಶ್ರಮಿಸುತ್ತಿರುವ ಸಂಘದ ಏಳಿಗೆಯನ್ನು ಸಹಿಸಿಕೊಳ್ಳಲಾರದೆ ಇರುವುದಕ್ಕೆ ಇಂತಹ ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ. ಅಭಿವೃದ್ಧಿ ಮಾಡುತ್ತಾರೆಂದು ಜನರು ಅಧಿಕಾರ ಕೊಟ್ಟರೆ ಇವರು ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಹೊಸತನ ಹುಡುಕಿ, ಪಕ್ಷವನ್ನು ರೊಚ್ಚಿಗೆಬ್ಬಿಸಿ, ಪ್ರಚಾರ ಪಡೆಯಲು ಇಂತಹ ಸಣ್ಣತನದ ಹೇಳಿಕೆ ನೀಡುತ್ತಿರುವುದು ದುರಂತ ಎಂದರು.

ಸಂಘಟನೆ ಎಂಬುದು ಒಂದು ಮಾಹನ್ ವೃಕ್ಷವಿದ್ದಂತೆ. ಇದನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ಕಾಂಗ್ರೆಸ್ ನಾಯಕರು ಹೇಳಿಕೊಂಡು ಸಮಯವನ್ನು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆರ್. ಎಸ್ ಎಸ್ ಸಂಘಟನೆಯ ರೆಂಬೆ ಕೊಂಬೆಗಳನ್ನು ಅಲುಗಾಡಿಸಲು ಯಾವ ಕಾಂಗ್ರೆಸ್ ನಾಯಕರಿಂದಲೂ ಸಾಧ್ಯವಿಲ್ಲ. ದೇಶಾದ್ಯಂತ ಇದ್ದ ಕಾಂಗ್ರೆಸ್ ಪಕ್ಷವನ್ನೇ ಸುಮಾರು 90% ಭಾಗ ನಿಮ್ಮ ಪಕ್ಷವನ್ನು ಜನರು ನಿಷೇಧ ಮಾಡಿದ್ದಾರೆ. ಉಳಿದ ಭಾಗದಲ್ಲಿ ನೀವು ಹೇಗೆ ಆರ್. ಎಸ್.ಎಸ್ ಬ್ಯಾನ್ ನಿಷೇಧ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ನಿಷೇಧಿಸುತ್ತಾರೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment