Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋರ್ಟ್ ಗೆ ಹಾಜರಾದ ಮುರುಘಾಶ್ರೀ ಹೇಳಿದ್ದೇನು : ಇಲ್ಲಿದೆ ಕಂಪ್ಲೀಟ್ ಡಿಟೈಲ್

---Advertisement---

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಸೆರೆವಾಸ ಸೇರಿ ಜಾಮೀನು ಪಡೆದಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳಿಗೆ ಕೊಂಚ ರಿಲೀಫ್ ಸಿಕ್ಕಿದೆ. ಕೋಟೆನಾಡಿಗೆ ಬರುವುದಕ್ಕೂ ಅನುಮತಿ ನೀಡಲಾಗಿದೆ. ಇದರ ನಡುವೆ ನಿನ್ನೆಯಷ್ಟೇ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಕೋರ್ಟ್ ಗೆ ಹಾಜರಾಗಿದ್ದರು. ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜೈಲಿನಿಂದ ಬಂದ ಮೇಲೆ ದಾವಣಗೆರೆಯಲ್ಲಿಯೇ ವಾಸವಿದ್ದ ಕಾರಣ ಕೋರ್ಟ್ ಗೆ ದಾವಣಗೆರೆಯಿಂದಾನೇ ಬಂದರು.

ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರಾದ ಬಳಿಕ ವಿಚಾರಣೆ ನಡೆದಿದೆ. ಈ ವಿಚಾರಣೆಯಲ್ಲಿ ಎ1 ಆರೋಪಿಯಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರು, ಎ2 ರಶ್ಮಿ, ಎ3 ಆರೋಪಿಯಾಗಿರುವ ಪರಮಶಿವಯ್ಯ ಅವರ ಹೇಳಿಕೆಗಳನ್ನ ದಾಖಲಿಸಿಕೊಳ್ಳಲಾಯ್ತು. ಒಟ್ಟು 51 ಸಾಕ್ಷಿಗಳ ಹೇಳಿಕೆಗೆ ಇಲ್ಲಿ ಶ್ರೀಗಳ ಹೇಳಿಕೆಯನ್ನ ದಾಖಲಿಸಿಕೊಳ್ಳಲಾಗಿದೆ. ಈ ವಿಚಾರಣೆ ಸುಮಾರು ಸಂಜೆ 5 ಗಂಟೆಯ ತನಕವೂ ನಡೆದಿದೆ.

ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಎದುರು ಹೇಳಿಕೆಗಳನ್ನ ದಾಖಲಿಸಲಾಗಿದೆ. ಶ್ರೀಗಳ ವಿರುದ್ಧದ ಮತ್ತೊಂದು ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ಮತ್ತೆ ಹಾಜರಾಗಬೇಕೆಂದು ತಿಳಿಸಲಾಗಿದೆ. ಒಟ್ಟಾರೆ ಮುರುಘಾ ಶ್ರೀಗಳು ಚಿತ್ರದುರ್ಗದ ಕೋರ್ಟ್ ಗೆ ಹಾಜರಾಗಿ ತಮ್ಮ ಮೇಲಿನ ಆರೋಪ, ಸಾಕ್ಷಿಗಳು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಬಂದಿದ್ದಾರೆ. ಸದ್ಯ ದಾವಣಗೆರೆಯಲ್ಲಿಯೇ ಇರುವ ಶ್ರೀಗಳು ಮತ್ತೆ ಚಿತ್ರದುರ್ಗಕ್ಕೆ ಯಾವಾಗ ಹೋಗ್ತಾರೆ..? ಭಕ್ತರ ಜೊತೆಗೆ ಮೊದಲಿನಂತೆ ಯಾವಾಗ ಮಾತನಾಡುತ್ತಾರೆ ಅನ್ನೋದನ್ನ ಭಕ್ತ ವೃಂದ ಕಾಯುತ್ತಿದೆ. ಸದ್ಯ ಕೇಸಿಂದ ಮುಕ್ತಿ ಸಿಕ್ಕ ಮೇಲೆ ಶ್ರೀಗಳು ಮೊದಲಿನಂತೆ ಆಗಬಹುದು ಎಂಬ ನಿರೀಕ್ಷೆಯು ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment