Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪೊಕ್ಸೋ ಪ್ರಕರಣ : ಆರೋಪಿಗೆ 20 ವರ್ಷ ಶಿಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ) ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ ರೂ. 25000 ದಂಡ ವಿಧಿಸಿ ಆದೇಶ ಹೊರಡಿಸಿದೆ.

ಚಳ್ಳಕೆರೆ ತಾಲೂಕಿನ ಭತ್ತಯ್ಯನಹಟ್ಟಿ ಗ್ರಾಮದ ಪುನೀತ್ ಕುಮಾರ್ ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ.
ತಾಲ್ಲೂಕಿನ ತೋಡ್ಲಾರಹಟ್ಟಿ ಗ್ರಾಮದ ತಮ್ಮಯ್ಯ ಎಂಬುವವರ ಅಪ್ರಾಪ್ತ ಮಗಳನ್ನು ಭತ್ತಯ್ಯನಹಟ್ಟಿ ಗ್ರಾಮದ ಪುನೀತ್ ಕುಮಾರ್ ಅಪಹರಿಸಿ ಅತ್ಯಾಚಾರ ಮಾಡಿರುತ್ತಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮಯ್ಯ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದಿನಾಂಕ: 05.05.2023 ರಂದು ದೂರು ನೀಡಿರುತ್ತಾರೆ. ಈ ದೂರಿನನ್ವಯ ಪೋಕ್ಸೋ ಪ್ರಕರಣ
ದಾಖಲಾಗಿರುತ್ತದೆ.

ತಳಕು ವೃತ್ತದ ಸಿಪಿಐ ಸಮಿವುಲ್ಲಾ.ಕೆ ಅವರ ನೇತೃತ್ವದಲ್ಲಿ
ಪ್ರಕರಣದ ತನಿಖೆ ನಡೆಸಿದ ನಾಯಕನಹಟ್ಟಿ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗ ಘನ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ಅವರು ಪೋಕ್ಸೋ ಕಾಯ್ದೆಯಡಿ ಆರೋಪಿಗೆ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ್ದಕ್ಕಾಗಿ 07 ವರ್ಷ ಕಠಿಣ ಸಜೆ ಮತ್ತು 5,000/-ರೂ ದಂಡ, ಬಲವಂತವಾಗಿ ಅತ್ಯಾಚಾರ ಮಾಡಿದ್ದಕ್ಕಾಗಿ 20 ವರ್ಷ ಕಠಿಣ ಸಜೆ ಮತ್ತು 25,000/- ರೂ ದಂಡ ಹಾಗೂ ಸರ್ಕಾರದ ವತಿಯಿಂದ ಪ್ರಕರಣದಲ್ಲಿ ನೊಂದ ಬಾಲಕಿಗೆ 4,00.000/- ರೂ ಪರಿಹಾರ ನೀಡಲು ಆದೇಶದಲ್ಲಿ ತಿಳಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಹೆಚ್ ಆರ್ ಜಗದೀಶ್ ರವರು ವಾದ ಮಂಡಿಸಿರುತ್ತಾರೆ.

ಚಳ್ಳಕೆರೆ ಉಪ ವಿಭಾಗದ ತಳಕು ವೃತ್ತ ವ್ಯಾಪ್ತಿಯ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಎಸ್ ಪಿ. ರಂಜಿತ್ ಕುಮಾರ್ ಬಂಡಾರು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...