Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್ : ಹಿಂಗ್ಯಾಕಂದ್ರು ಸಿಎಂ ಆರ್ಥಿಕ ಸಲಹೆಗಾರ..!

---Advertisement---

ಕೊಪ್ಪಳ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನ ನೀಡಿದೆ. ಆದರೆ ಈ ಗ್ಯಾರಂಟಿಗಳನ್ನು ನೀಡಿದ ಮೇಲೆ ಸರ್ಕಾರಕ್ಕೆ ಸಾಕಷ್ಟು ನಷ್ಟವಾಗಿದೆ ಅಂತ ವಿರೋಧ ಪಕ್ಷ ಆಗಾಗ ಹೇಳಿದ್ರು, ಆ ರೀತಿಯ ನಷ್ಟವೇನು ಆಗಿಲ್ಲ ಅಂತ ಕಾಂಗ್ರೆಸ್ ಸರ್ಕಾರ ಸಮರ್ಥನೆ ಮಾಡಿಕೊಂಡೆ ಬಂದಿದೆ. ಆದರೆ ಈಗ ಸಿಎಂ ಆರ್ಥಿಕ ಸಲಹೆಗಾರರೇ ನೀಡಿರುವ ಹೇಳಿಕೆ ಅದನ್ನ ಸತ್ಯ ಎಂದೇ ನಂಬುವಂತೆ ಮಾಡಿದೆ.

 

ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ರ್ಯಾವಣಿಕದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ರೈತನೊಬ್ಬ ನಮ್ಮ ಹೊಲಕ್ಕೆ ಹೋಗುವುದಕ್ಕೆ ರಸ್ತೆ ಮಾಡಿಕೊಡಿ ಎಂದು ಮನವಿ ನೀಡಿದ್ದರು. ಈ ವೇಳೆ ಆ ರೈತನಿಗೆ ಉತ್ತರ ನೀಡಿದ ಬಸವರಾಜ್ ರಾಯರೆಡ್ಡಿ, ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್ ಮಾಡೋಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ಕೊಡ್ತೇನೆ ಎಂದು ಹೇಳಿದ್ದಾರೆ.

 

ಈ ಹೇಳಿಕೆ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಮಾತುಗಳನ್ನ ಮತ್ತೆ ಉಚ್ಚರಿಸುತ್ತಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಬಡವರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮವಾಗಿದೆ. ಬ್ರಿಡ್ಜ್ ರಸ್ತೆಗಳ ದುರಸ್ತಿಗಾಗಿ ಶಾಸಕರಿಗೆ ಸ್ವಲ್ಪ ಹಣ ಕೊಡುತ್ತಿದ್ದೇವೆ. ಜೆಡಿಎಸ್ ಶಾಸಕರಿಗೂ ಕೊಡುತ್ತಿದ್ದೇವೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...