ಚಿತ್ರದುರ್ಗ.ಜುಲೈ.07: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ.
ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.
ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊAದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











