Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

---Advertisement---

ಬೆಂಗಳೂರು: ಜುಲೈ 9 ಅಂದ್ರೆ ನಾಳೆ ಭಾರತ್ ಬಂದ್ ಮಾಡಲಾಗಿದೆ. ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಮುಷ್ಕರಕ್ಕೆ ಕರೆ ನೀಡಿದೆ. ದೊಡ್ಡ ಕಂಪನಿಗಳಿಗೆ ಅನುಕೂಲಕರ ಮತ್ತು ಕಾರ್ಮಿಕರಿಗೆ ತೊಂದರೆಯಾಗುವ ಸರ್ಕಾರಿ ನೀತಿಗಳನ್ನು ವಿರೋಧಿಸಲು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

ಸಂಘಟಿತ ಮತ್ತು ಅಸಂಘಟಿತ ವಲಯಗಳಿಂದ 25 ಕೋಟಿಗೂ ಹೆಚ್ಚು ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಂಬಂಧಿತ ಮಾರ್ಮಿಕರು ಮತ್ತು ರೈತ ಸಂಘಟನೆಗಳೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೋರೇಟ್ ಪರ ನೀತಿಗಳಿಗೆ ತಮಗಮ ವಿರೋಧವನ್ನು ದಾಖಲಿಸಲು ಮುಷ್ಕರಕ್ಕೆ ಕರೆ ನೀಡಿದೆ.

ಹಾಗಾದ್ರೆ ಏನು ಇರಲ್ಲ ಎಂಬುದು ಇಲ್ಲಿದೆ ಮಾಹಿತಿ,

* ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು.

* ಅಂಚೆ ಕಾರ್ಯಾಚರಣೆಗಳು.

* ಕಲ್ಲಿದ್ದಲು ಗಣಿಗಾರಿಕೆ ಮತ್ತು ಕೈಗಾರಿಕಾ ಉತ್ಪಾದನೆ.

* ರಾಜ್ಯ-ಚಾಲಿತ ಸಾರ್ವಜನಿಕ ಸಾರಿಗೆ.

* ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು.

* ಗ್ರಾಮೀಣ ಪ್ರದೇಶಗಳಲ್ಲಿ ರೈತರ ನೇತೃತ್ವದ ರ್ಯಾಲಿಗಳು.

ಹಾಗಾದ್ರೆ ಏನು ಇರುತ್ತೆ..?

* ಶಾಲೆಗಳು ಮತ್ತು ಕಾಲೇಜುಗಳು ತೆರೆದಿರುತ್ತವೆ.

* ಖಾಸಗಿ ಕಚೇರಿಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ.

* ರೈಲ್ವೆ ಇಲಾಖೆಯಿಂದ ಖಚಿತವಾದ ಮುಷ್ಕರವಿಲ್ಲದಿದ್ದರೂ ರೈಲು ವಿಳಂಬಗಳನ್ನು ನಿರೀಕ್ಷಿಸಲಾಗಿದೆ.

 

ಕಾರ್ಮಿಕರ ರಕ್ಷಣೆಗೆ ಹಾನಿ ಮಾಡುವ ಕಾರ್ಮಿಕ ನೀತಿಗಳು, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಹಣದುಬ್ಬರ, ಆರೋಗ್ಯ, ಶಿಕ್ಷಣ ಮತ್ತು ನಾಗರಿಕ ಸೌಲಭ್ಯಗಳಲ್ಲಿ ಕಡಿತ, ಯುವಕರಿಗೆ ಉದ್ಯೋಗ ನೀಡುವ ಬದಲು ಸರ್ಕಾರ ನಿವೃತ್ತರನ್ನು ನೇಮಿಸಿಕೊಳ್ಳುತ್ತಿರುವುದು, 10 ವರ್ಷಗಳಲ್ಲಿ ಕಾರ್ಮಿಕ ಸಮ್ಮೇಳನವಿಲ್ಲ ಎಂದು ಆರೋಪಿಸಿ ಭಾರತ್ ಬಂದ್​​ಗೆ ಕರೆ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment