ಬೆಂಗಳೂರು: ಜನೌಷಧ ಕೇಂದ್ರಗಳಿಗೆ ಸರಿಯಾದ ಔಷಧಗಳು ಪೂರೈಕೆಯಾಗದ ಕಾರಣ ರಾಜ್ಯ ಸರ್ಕಾರ ಜನೌಷಧ ಕೇಂದ್ರವನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಆದರೆ ಇದೀಗ ಕೋರ್ಟ್ ಈ ನಿರ್ಧಾರಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನ ಕೂಡಲೇ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಆದೇಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಅವರು ಹೊರಡಿಸಿದ್ದಾರೆ.
ರೋಗಿಗಳು ಯಾವುದೇ ಔಷಧವನ್ನು ಆಸ್ಪತ್ರೆಯ ಹೊರಗೆ ಖರೀದಿಸದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು, ಅನುಮೋದನೆಗೆ ಬಾಕಿ ಇರುವ ಅರ್ಜಿಗಳನ್ನು ತಿರಸ್ಕರಿಸಲು ಆದೇಶದಲ್ಲಿ ತಿಳಿಸಲಾಗಿತ್ತು. ಆದರೆ ಸರ್ಕಾರದ ಆದೇಶದಿಂದ ಬಿಜೆಪಿ ಮಾತ್ರವಲ್ಲ ಜನ ಸಾಮಾನ್ಯರು ಕೂಡ ಆಕ್ರೋಶ ಹೊರ ಹಾಕಿದ್ದರು. ಜನೌಷಧ ಕೇಂದ್ರಗಳು ಇದ್ದರೆ ಮಧ್ಯಮ ವರ್ಗದ ಅದೆಷ್ಟೋ ಜನರ ಹಣ ಸಾಕಷ್ಟು ಉಳಿತಾಯವಾಗುತ್ತಿತ್ತು. ಸಾಕಷ್ಟು ಔಷಧಗಳು ಕಡಿಮೆ ಬೆಲೆಗೆ ಸಿಗುತ್ತಾ ಇತ್ತು ಎಂದು ಬೇಸರವನ್ನು ಹೊರ ಹಾಕಿದೆ.
ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದ ವಿಚಾರಕ್ಕೆ ಈಗ ತಡೆ ಸಿಕ್ಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರ ಮುಚ್ಚಲು ಆದೇಶಿಸಿದ್ದ ಸರ್ಕಾರದ ನಿರ್ಧಾರ ಪ್ರಶ್ನಜಸಿ, ಹೈಕೋರ್ಟ್ ನಲ್ಲಿ 16 ಅರ್ಜಿಗಳು ಸಲ್ಕಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆಯವರೆಗೆ ಜನೌಷಧ ಕೇಂದ್ರಗಳನ್ನು ಮುಚ್ಚಬಾರದು ಎಂದು ಮಧ್ಯಂತರ ಆದೇಶ ನೀಡಿದೆ.



