Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿಗಳ ತವರು ಜಿಲ್ಲೆ ವರುಣಾದಲ್ಲೇ ಶಿಕ್ಷಕರ ಕೊರತೆ : ಹೊರಗೆ ಬಂದ ಮಕ್ಕಳು..!

---Advertisement---

ಮೈಸೂರು: ಮಕ್ಕಳ ಭವಿಷ್ಯ ಉಜ್ವಲವಾಗಬೇಕು ಅಂದ್ರೆ ಅಲ್ಲಿ ಶಿಕ್ಷಣ ಬಹಳ ಮುಖ್ಯ. ಉತ್ತಮವಾದ ಶಿಕ್ಷಣ ಕೊಟ್ಟರೆ ಭವಿಷ್ಯವೂ ಉತ್ತಮವಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಶಿಕ್ಷಣಕ್ಕೆ ಹೆಚ್ವಿನ ಮಹತ್ವವನ್ನು ನೀಡಿದವರೆ. ಆದರೆ ಅವರ ತವರು ಜಿಲ್ಲೆಯಲ್ಲಿಯೇ ಶಿಕ್ಷಣದ ಕೊರತೆಯನ್ನ ಮಕ್ಕಳು ಎದುರಿಸುವಂತಾಗಿದೆ. ಅದಕ್ಕೆ ಕಾರಣ ಶಾಲೆಯಲ್ಲಿ ಶಿಕ್ಷಕರು ಇಲ್ಲದೆ ಇರುವುದು. ಜೂನ್, ಜುಲೈ ತಿಂಗಳಲ್ಲಿ ಶಿಕ್ಷಣ ಚಟುವಟಿಕೆಗಳು ಏರುಗತಿಯಲ್ಲಿ ಇರುತ್ತವೆ. ಈಗಷ್ಟೇ ಬೇಸಿಗೆ ರಜೆಯನ್ನ ಮುಗಿಸಿಕೊಂಡು ಮಕ್ಕಳು ಶಾಲೆಯತ್ತ ಬಂದು, ಪಾಠದತ್ತ ಗಮನ ಹರಿಸುತ್ತಿರುತ್ತವೆ. ಆದರೆ ಈ ಸಮಯದಲ್ಲಿಯೇ ಶಿಕ್ಷಕರಿಲ್ಲದ ಸಮಸ್ಯೆ ಕಾಡುತ್ತಿದೆ.

ವರುಣಾದ ಕೊಣನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಈ ಸಮಸ್ಯೆ ಕಾಡುತ್ತಿದೆ. ಒಂದು ಕಡೆ ಮೊದಲೇ ಶಿಕ್ಷಕರ ಕೊರತೆ, ಮತ್ತೊಂದು ಕಡೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ವರ್ಗಾವಣೆ ಮಾಡ್ತಾ ಇದ್ದಾರೆ‌. ಶಾಲೆ ಶುರುವಾಗಿ ಇಷ್ಟು ದಿನವಾದರೂ ಶಿಕ್ಷಕರನ್ನು ನೇಮಕ ಮಾಡಿಲ್ಲ, ಇರುವ ಶಿಕ್ಷಕರನ್ನು ವರ್ಗಾವಣೆ ಮಾಡ್ತಾ ಇದ್ದಾರೆ ಎಂದು ಮಕ್ಕಳು ರೊಚ್ಚಿಗೆದ್ದಿದ್ದಾರೆ. ಹೀಗಾಗಿ ತರಗತಿಯನ್ನು ಬಹಿಷ್ಕರಿಸಿ, ತಮ್ಮ ಪೋಷಕರೊಂದಿಗೆ ಪ್ರತಿಭಟನೆಗೆ ಇಳಿದಿದ್ದಾರೆ.

ಈ ಪ್ರತಿಭಟನೆಗೆ ಶಾಲಾಭಿವೃದ್ಧಿಯ ಸಮಿತಿಯ ಸದಸ್ಯರು ಕೂಡ ಸಾಥ್ ನೀಡಿದ್ದಾರೆ. ಹೆಚ್ಚುವರಿ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯ ಹಾಕಿದ್ದಾರೆ ಪೋಷಕರು. ಶಿಕ್ಷಣ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ. 120 ಮಕ್ಕಳು ಇರುವ ಶಾಲೆಗೆ ಇರುವುದು ಮೂವರೇ ಶಿಕ್ಷಕರು. ಅಷ್ಟು ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡುವುದಾದರೂ ಹೇಗೆ..? ಮಕ್ಕಳ ಭವಿಷ್ಯವಾದರೂ ಸರಿಯಾಗುವುದು ಹೇಗೆ ಎಂಬ ಪ್ರಶ್ನೆ ಪೋಷಕರದ್ದು. ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಈ ಸಮಸ್ಯೆಯನ್ನ ಬಗೆಹರಿಸುತ್ತಾರಾ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...