ಚಂಡೀಗಡ: ಪಂಜಾಬ್ ನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ಧ ನೋಟೀಸ್ ಜಾರಿಯಾಗಿದೆ. ಅವರು ಪೊಲೀಸರ ಬಗ್ಗೆ ನೀಡಿದ್ದ ಹೇಳಿಕೆಯೊಂದು ಸಾಕಷ್ಟು ವಿವಾದಕ್ಕೆ ತಿರುಗಿತ್ತು. ಈ ಹಿನ್ನೆಲೆ ಅವರ ವಿರುದ್ಧ ಮಾನನಷ್ಟ ನೋಟೀಸ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದರು. ಈ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ನಾಯಕ ದಲ್ಜಿತ್ ಸಿಂಗ್ ಚೀಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸ್ ಅಧಿಕಾರಿಯೊಬ್ಬರು ಸಿಧುಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ನಾನು ನವಜೋತ್ ಸಿಂಗ್ ಸಿಧು ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ ಎಂದು ಚಂಡೀಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲ್ಶರ್ ಸಿಂಗ್ ಚಂದೇಲ್ ಹೇಳಿದ್ದಾರೆ.