ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ದಾವಣಗೆರೆ. ಜುಲೈ.12: ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.
ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
23 ಜೋಡಿ ವೈವಾಹಿಕ ಜೀವನ ಸುಖಾಂತ್ಯ:
ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 20 ಪ್ರಕರಣ ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್