ಚಿತ್ರದುರ್ಗ. ಜುಲೈ. 14: ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳ ಹರಾಜು ಪ್ರಕ್ರಿಯೆಗೆ ಕ್ರಮಕೈಗೊಳ್ಳಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡಿರುವ ವಾಹನಗಳನ್ನು ವಾಹನದ ಮಾಲೀಕರು ವಾಪಸ್ ಪಡೆದುಕೊಳ್ಳದೇ ಇರುವುದರಿಂದ 23 ಮೋಟಾರ್ ಸೈಕಲ್, 02 ಆಟೋ ಹಾಗೂ ಒಂದು ಆಲ್ಟೋ ಕಾರ್ ವಾಹನಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಇಲಾಖಾ ಮೇಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿಕೊಂಡು ನಂತರ ಘನ ನ್ಯಾಯಾಲಯದ ಅನುಮತಿಯನ್ನು ಪಡೆದುಕೊಂಡಿದ್ದು ಈ ವಾಹನಗಳನ್ನು ಬಹಿರಂಗ ಹರಾಜು ಪ್ರಕ್ರಿಯೆಯ ಮೂಲಕ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಆಸಕ್ತರು ಪೊಲೀಸ್ ನಿರೀಕ್ಷಕರು, ಗ್ರಾಮಾಂತರ ಪೊಲೀಸ್ ಠಾಣೆ, ಚಿತ್ರದುರ್ಗ ಮೊಬೈಲ್ ಸಂಖ್ಯೆ 9480803131, 9480803148 ರವರನ್ನು ಸಂಪರ್ಕಿಸಿ, ನಿಗದಿತ ಹರಾಜು ದಿನಾಂಕ ಮತ್ತು ನಿಬಂದನೆಗಳನ್ನು ತಿಳಿದುಕೊಳ್ಳಬಹುದು ಎಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










