ಅಸಮರ್ಪಕ ಮೊಟ್ಟೆ ವಿತರಣೆಗೆ ಆಯೋಗ ಆಕ್ಷೇಪ

1 Min Read

ಚಿತ್ರದುರ್ಗ, ಜುಲೈ. 14 : ಅಜೀಮ್ ಪ್ರೇಮ್‍ಜಿ ಪೌಂಡೇಶನ್ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಿಸಲು ಸಹಾಯ ನೀಡಿದೆ. ಸರ್ಕಾರ ವಾರದ 6 ದಿನವೂ ಮೊಟ್ಟೆ ನೀಡುವಂತೆ ನಿರ್ದೇಶನ ನೀಡಿದೆ. ಆದರೆ, ಶಾಲೆಗಳಲ್ಲಿ ವಾರಕ್ಕೆ 3 ದಿನ ಮಾತ್ರ ಮೊಟ್ಟೆ ನೀಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ತಾಕೀತು ಮಾಡಿದರು.

ಸೋಮವಾರ ಜಿಲ್ಲೆಗೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ನಂತರ, ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿತು, ಈ ವೇಳೆ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಮೇಲಿನಂತೆ ನಿರ್ದೇಶನ ನೀಡಿದರು.

ಅಕ್ಷರ ದಾಸೋಹ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ವಾರದ 6 ದಿನವು ಮೊಟ್ಟೆ ನೀಡುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜಿಲ್ಲೆಯ ಇಲಾಖೆ ಹಾಸ್ಟೆಲ್‍ಗಳಲ್ಲಿ ಮಕ್ಕಳ ಹಾಜರಾತಿಯನ್ನು ಬಗ್ಗೆ ನಿಗಾವಹಿಸುವಂತೆ ಅವರು ಸೂಚಿಸಿದರು.

Share This Article
Leave a Comment

Leave a Reply

Your email address will not be published. Required fields are marked *