ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ.ಜು. 17: ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 27 ನೇ ಲಾಂಛನ ದೀಕ್ಷಾ ಮಹೋತ್ಸವ, 40 ನೇ ವಸಂತೋತ್ಸವದ ನಿಮಿತ್ತ ಪ್ರತಿಭಾ ಪುರಸ್ಕಾರ, ವಧೂ-ವರರ ಸಮಾವೇಶ, ರಕ್ತದಾನ ಶಿಬಿರವನ್ನು ಜು.18 ರಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಹೇಳಿದರು.
ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಅವಿರತ ಶ್ರಮದಿಂದ ಭೋವಿ ಗುರುಪೀಠ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, ದೀಕ್ಷಾ ಮಹೋತ್ಸವ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ಉಪನಾಯಕರಾದ ಸುನೀಲ್ ವಲ್ಯಾಪುರ, ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ, ಬೆಂಗಳೂರಿನ ಶ್ರೀ.ಸಿ.ವಿ.ರಾಮನ್ ನಗರದ ಶಾಸಕ ಎಸ್.ರಘು, ಲಿಂಗಸೂರು ಶಾಸಕರಾದ ಮಾನಪ್ಪ ವಜ್ಜಲ್, ಬೆಂಗಳೂರು ಪುಲಿಕೇಶಿ ನಗರ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡ ಶಾಸಕ ವೆಂಕಟೇಶ್ ವಿ., ಬೆಂಗಳೂರು ಮಹದೇವಪುರ ಕ್ಷೇತ್ರದ ಶಾಸಕ ಶ್ರೀಮತಿ ಮಂಜುಳಾ ಲಿಂಬಾವಳಿ, ಕೊಲಾರ ಸಂಸದ ಮಲ್ಲೇಶ್ಬಾಬು, ಎಂ.ಎಲ್.ಸಿ.ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯುವ ಜನ ಪ್ರಾಧಿಕಾರದ ಅಧ್ಯಕ್ಷರಾದ ವಿ.ಶಾಂತಕುಮಾರ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಓ.ಸಿ.ಸಿ.ಐ. ರಾಷ್ಟ್ರೀಯ ಅಧ್ಯಕ್ಷಾದ ಹೆಚ್.ರವಿ ಮಾಕಳಿ, ರಾಜ್ಯಾಧ್ಯಕ್ಷರಾದ ಹೆಚ್.ಆನಂದಪ್ಪ, ಮಾಜಿ ಸಚಿವರಾದ ವೆಂಕಟರಮಣಪ್ಪ, ಗೂಳಿಹಟ್ಟಿ ಡಿ.ಶೇಖರ್, ಮಾಜಿ ಸಂಸದ ಜನಾರ್ಧನಸ್ವಾಮಿ, ಮಾಜಿ ಶಾಸಕರಾದ ಬಂಗಾರಪೇಟೆಯ ನಾರಾಯಣಸ್ವಾಮಿ, ನೆಲಮಂಗಲ ಎಂ.ವಿ.ನಾಗರಾಜು, ಲಿಂಗಸೂರಿನ ಡಿ.ಎಸ್.ಹಲಗೇರಿ, ಬೆಂಗಳೂರು ಪುಲಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಬೆಳಗಾವಿ ಬಾಳಾಸಾಹೇಬವಡ್ಡರ, ಭೋವಿ ನಿಗಮದ ಮಾಜಿ ಅಧ್ಯಕ್ಷಾರದ ಜಿ.ವಿ.ಸೀತಾರಾಮ್, ಜಿಲ್ಲೆಯ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಮಂಜುನಾಥ ಪ್ರಸಾದ್, ಎಸ್.ಎಲ್.ಗಂಗಾಧರಪ್ಪ, ಭೀಮಯ್ಯ ಮುಂತಾದವರು ಭಾಗವಹಿಸಲಿದ್ದಾರೆ.
ಇದೆ ಸಂದರ್ಭದಲ್ಲಿ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 25 ಲಕ್ಷಕ್ಕೂ ಹೆಚ್ಚು ಪ್ರೋತ್ಸಾಹಧನ ವಿತರಿಸಲಾಗುತ್ತದೆ ಎಂದು ಚಿಕ್ಕಂದವಾಡಿ ತಿಪ್ಪೇಸ್ವಾಮಿ ಮಾಹಿತಿ ನೀಡಿದರು. ಪತ್ರಿಕಾ ಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ಡಿ.ಸಿ.ಮೋಹನ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಆಂಜನೇಯ, ಶ್ರೀ ಭೋವಿ ಗುರುಪೀಠದ ಕಾರ್ಯನಿರ್ವಹಣಾಧಿಕಾರಿಗಳಾದ ಗೌನಹಳ್ಳಿ ಗೋವಿಂದಪ್ಪ, ನಿರ್ದೇಶಕರಾದ ಟಿ.ದೇವರಾಜ್, ಡಾ.ತಿಮ್ಮಣ್ಣ, ಪ್ರಕಾಶ್ ವೆಂಕಟಪತಿ ಮುಂತಾದವರು ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್